Belagavi News In Kannada | News Belgaum

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ

ಗೋಕಾಕ:  ಇಲ್ಲಿನ ಹಿಲ್‌ ಗಾರ್ಡನ್‌  ಕಚೇರಿಯಲ್ಲಿ  ಯಮಕನಮರಡಿ ಮತಕ್ಷೇತ್ರದ  ಕರಗುಪ್ಪಿ ಗ್ರಾಮದ 25 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ  ಸೇರ್ಪಡೆಯಾದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ಮತಕ್ಷೇತ್ರದಲ್ಲಿ ಹತ್ತಾರು ಯೋಜನೆಗಳನ್ನು ಸಹಕಾರಗೊಳಿಸಿದ ಶಾಸಕರ ಆಡಳಿತಕ್ಕೆ ಮನಸೋತು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸಂಪೂರ್ಣ ಬೆಂಬಲಿಸಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ  ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತರನ್ನು ಆತ್ಮೀಯವಾಗಿ ಬರಮಾಡಿಕೊಂಡರು.//////