Belagavi News In Kannada | News Belgaum

ಅನುಭವಿ ನಾಯಕನ ಅಕಾಲಿಕ ಅಗಲಿಕೆ ನೋವು ತಂದಿದೆ; ಪ್ರಧಾನಿ ಕಂಬನಿ

ಪ್ರಧಾನಿ ಮೋದಿ ಸಂತಾಪ ಸೂಚಕ ವೈಯಕ್ತಿಕ ಪತ್ರ

ನವದೆಹಲಿ:  ಹೃದಯಾಘಾತದಿಂದ ವಿಧಿವಶರಾಗಿರುವ ಆಹಾರ ಹಾಗೂ ಅರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದು, ಉಮೇಶ್ ಕತ್ತಿ ಅವರ ಪತ್ನಿಗೆ ಸಾಂತ್ವನ ಹೇಳಿ ಪತ್ರ ಬರೆದಿದ್ದಾರೆ.

ಸಚಿವ ಉಮೇಶ್ ಕತ್ತಿ ಅವರ ಪತ್ನಿ ಶೀಲಾ ಉಮೇಶ್ ಕತ್ತಿ ಅವರಿಗೆ ಪ್ರಧಾನಿ ಮೋದಿಯವರು ಸಂತಾಪ ಸೂಚಕ ಪತ್ರದ ಮೂಲಕ ಸಾಂತ್ವನ ಹೇಳಿದ್ದು, ಕರ್ನಾಟಕದ ಅಭಿವೃದ್ಧಿಗೆ ಸಚಿವ ಉಮೇಶ್ ಕತ್ತಿ ನೀಡಿದ್ದ ಕೊಡುಗೆ ಅಪಾರವಾಗಿತ್ತು.

ಉತ್ಕೃಷ್ಣ ಕೊಡುಗೆ ನೀಡಿದ್ದ ಹಿರಿಯ ಸಚಿವ, ಅನುಭವಿ ನಾಯಕನನ್ನು ಕಳೆದುಕೊಂಡಿರುವುದು ಆಘಾತವನ್ನುಂಟು ಮಾಡಿದೆ.

ಸಂಘಟನಾತ್ಮಕ ಶಕ್ತಿಯನ್ನು ಹೊಂದಿದ್ದ, ಪಕ್ಷದ ಬಲವರ್ಧನೆಗೆ ಕಾರಣವಾಗಿದ್ದ ಸದಾ ಧನಾತ್ಮಕ ಚಿಂತನೆಗಳನ್ನು ಮಾಡುತ್ತಿದ್ದ ಧೀಮಂತ ನಾಯಕನನ್ನು ಕಳೆದುಕೊಂಡ ದು:ಖ ಶಬ್ದಗಳಲ್ಲಿ ಹೇಳಲು ಅಸಾಧ್ಯ ಎಂದು ಕಂಬನಿ ಮಿಡಿದಿದ್ದಾರೆ.

ಉಮೇಶ್ ಕತ್ತಿ ಹೆಚ್ಚು ಕಾಲ ದೈಹಿಕವಾಗಿ ನಮ್ಮ ಮಧ್ಯೆ ಇಲ್ಲದಿದ್ದರೂ ಅವರ ವಿಚಾರಧಾರೆಗಳು, ಮೌಲ್ಯಗಳು ಸದಾಕಾಲ ಜೀವಂತವಾಗಿರುತ್ತದೆ.

 

ಉಮೇಶ್ ಕತ್ತಿ ಅವರ ಅಗಲಿಕೆ ಬರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಬೆಂಬಲಿಗರಿಗೆ ದೇವರು ಕರುಣಿಸಲಿ.

ಉಮೇಶ್ ಕತ್ತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ