Belagavi News In Kannada | News Belgaum

ಗಣಪತಿ ವಿಸರ್ಜನೆ ವೇಳೆ ಯುವಕನ ಕೊಲೆ; ಮೂವರು ಆರೋಪಿತರು ವಶಕ್ಕೆ

ಬೆಳಗಾವಿ: ಗಣಪತಿ ವಿಸರ್ಜನೆ ವೇಳೆ ಯುವಕನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಅರ್ಜುನಗೌಡ ಪಾಟೀಲ್ (20) ಹತ್ಯೆ ಮಾಡಲಾಗಿದೆ. ಅರ್ಜುನಗೌಡ ಪಾಟೀಲ್ ಕುಸಿದು ಬೀಳುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಈ ಕೊಲೆಗೆ ವಿದ್ಯಾರ್ಥಿಗಳ ವೈಯಕ್ತಿಕ ವಿಚಾರದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಈ ಕುರಿತು ಮುರುಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.//////