Belagavi News In Kannada | News Belgaum

ಸೆ. 19ರಂದು ಸಿಎಂ ಮನೆ ಮುಂದೆ ಪ್ರತಿಭಟನೆ: ಬಸವಜಯ ಮೃತ್ಯುಂಜಯ ಶ್ರೀ

ಹಾವೇರಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ರಾಜ್ಯ ಸರ್ಕಾರಕ್ಕೆ ನೀಡಿದ್ದ ಗಡುವು ಮುಗಿದಿದೆ. ಹೀಗಾಗಿ ಸೆಪ್ಟೆಂಬರ್ 19 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿಯಲ್ಲಿರುವ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ನೀಡಿದ್ದ ಗಡುವು ಮುಗಿದಿದ್ದು,ಶಿಗ್ಗಾವಿ, ಸವಣೂರು ತಾಲೂಕಿನ ಪ್ರತಿ ಗ್ರಾಮಗಳಿಗೆ ಸಂಚರಿಸಿ ಹೋರಾಟಕ್ಕೆ ಅಣಿಗೊಳಿಸಲಾಗುತ್ತಿದೆ. ಸಮಾಜದ ಬಡ ಮಕ್ಕಳ ಭವಿಷ್ಯದ ಕಲ್ಯಾಣಕ್ಕೆ ಹೋರಾಡುವುದು ಅನಿವಾರ್ಯವಾಗಿದೆ ಎಂದರು./////