Belagavi News In Kannada | News Belgaum

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆ ಆತ್ಮಹತ್ಯೆ

ಬೆಳಗಾವಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಬೆಳಗಾವಿ ತಾಲೂಕಿನ ಹಾಲಬಾವಿ ಗ್ರಾಮದಲ್ಲಿ ನಡೆದಿದೆ.

ಹಾಲಬಾಂವಿ ಗ್ರಾಮದ  ರೇಣುಕಾ ಭರಮಪ್ಪ ನಾಯಕ (20) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ.  ಬೆಳಗಾವಿ ತಾಲೂಕಿನ ಹುಲ್ಯಾನೂರ ಗ್ರಾಮದ ರೇಣುಕಾ ಅವರು ಹಾಲಬಾವಿ ಗ್ರಾಮದ ಭರಮಪ್ಪ ನಾಯಕ ಅವರನ್ನು 2022ರ ಏಪ್ರಿಲ್ ನಲ್ಲಿ ವಿವಾಹವಾಗಿದ್ದರು. ಆದರೆ ಗಂಡನ ಮನೆಯವರು ವರದಕ್ಷಿಣೆಗಾಗಿ ನಿರಂತರ ಕಿರುಕುಳ ನೀಡುತ್ತಿದ್ದರು. ಈ  ಕಿರುಕುಳದಿಂದ ಬೇಸತ್ತ ರೇಣುಕಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಮಹಿಳೆಯ ಪಾಲಕರು ಗಂಡನ ಮನೆಯ ನಾಲ್ವರ ಸದಸ್ಯರ ವಿರುದ್ದ ಆರೋಪ ಮಾಡಿದ್ದಾರೆ. ಈ ಕುರಿತು ಕಾಕತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  //////