Belagavi News In Kannada | News Belgaum

ಸೇವಾಸಿಂಧು ಪೋರ್ಟಲ್‍ನಲ್ಲಿ ವಿವಿಧ ಸೌಲಭ್ಯಕ್ಕೆ ಅರ್ಜಿ: ಅವಧಿ ವಿಸ್ತರಣೆ

ಬೆಳಗಾವಿ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಪಂಗಡದ ಸಮುದಾಯಗಳ ಅರ್ಹ ಫಲಾನುಭವಿಗಳಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದ್ದು, ಫಲಾಪೇಕ್ಷಿಗಳು “ಗ್ರಾಮಒನ್” ಅಥವಾ “ಬೆಳಗಾವಿಒನ್” ಅಥವಾ ಕರ್ನಾಟಕಒನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈಗಾಗಲೇ ಸುವಿಧಾ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿರುವವರು ಮತ್ತೆ ಅರ್ಜಿ ಸಲ್ಲಿಸಬೇಕಾಗಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ https://sevasindhu.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರು, ಬೆಳಗಾವಿ ಜಿಲ್ಲಾ ಕಚೇರಿ ಸುವರ್ಣಸೌಧ ಬೆಳಗಾವಿ ದೂರವಾಣಿ ಸಂಖ್ಯೆ: 0831-2451252 ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ./////