Belagavi News In Kannada | News Belgaum

ಬೂದಿಗೊಪ್ಪ ಕ್ರಾಸ್ ಬಳಿ ಸರಣಿ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಬೆಳಗಾವಿ: ಲಾರಿ-ಕಾರು-ಬೈಕ್ ಮಧ್ಯೆ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ ರವಿವಾರ ನಡೆದಿದೆ.

ಯರಗಟ್ಟಿ ಕಡೆಗೆ ಹೊರಟಿದ್ದ ಕಾರು, ಬೆಳಗಾವಿ ಕಡೆಗೆ ಬರುತ್ತಿದ್ದ ಸೀಮೆಂಟ್ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಕಾರನಲ್ಲಿದ್ದ ಕುಡಚಿ ಎಎಸ್ಐ ಪರುಶರಾಮ ಹಲಕಿ ಪತ್ನಿ ರುಕ್ಮಿಣಿ(48), ಓರ್ವ ಪುತ್ರಿ,  ಡ್ರೈವರ್ ಸೇರಿ ಮೂವರು ಹಾಗೂ ಬೈಕ್ ಮೇಲಿದ್ದ ಅಜ್ಜಿ ಸಾವಿಗಿಡಾಗಿದ್ದಾರೆ.  ಬೈಕ್‌ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಹ  ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ.  ಕಾರಿನಲ್ಲಿಒಟು  ಐದು ಜನ, ಬೈಕ್ ಮೇಲೆ ಮೂವರು ಜನ ಸಂಚರಿಸುತ್ತಿದ್ದರು ಎಂದು ಮಾಹಿತಿ ತಿಳಿದುಬಂದಿದೆ.  ಸ್ಥಳಕ್ಕೆ ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.//////