Belagavi News In Kannada | News Belgaum

ಡಾ.ಪ್ರಭಾಕರ ಕೋರೆಯವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವದ ಆಚರಣೆಯ ಪೂರ್ವಭಾವಿ ಸಭೆ

ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯರು ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಡಾ.ಪ್ರಭಾಕರ ಕೋರೆಯವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವದ ಆಚರಣೆಯ ಕುರಿತಾಗಿ ಪೂರ್ವಭಾವಿ ಸಭೆಯನ್ನು 26.09.2022 ರಂದು ಬೆಳಗಾವಿಯ ಲಿಂಗರಾಜ ಕಾಲೇಜು ಕೇಂದ್ರ ಸಭಾಗೃಹದಲ್ಲಿ ಸಂಜೆ ಆಯೋಜಿಸಲಾಗಿತ್ತು.
ಬಹುಮುಖ ವ್ಯಕ್ತಿತ್ವದ ಡಾ.ಪ್ರಭಾಕರ ಕೋರೆಯವರ ಕಾರ್ಯಗಳು ಶಿP್ಷÀಣ, ಆರೋಗ್ಯ, ಕೃಷಿ ಹಾಗೂ ಸಂಶೋಧನೆಗಳಲ್ಲಿ ಅಗಾಧವಾದುದನ್ನು ಸಾಧಿಸಿ ಕೆಎಲ್‍ಇ ಸಂಸ್ಥೆಯ ಕೀರ್ತಿಯನ್ನು ಜಾಗತಿಕ ಭೂಪಟದಲ್ಲಿ ಗುರುತಿಸುವಂತೆ ಮಾಡಿz್ದÁರೆ ಹಾಗೂ ಇಡೀ ಉತ್ತರ ಕರ್ನಾಟಕದ ಧೀಮಂತ ನಾಯಕರಾಗಿ, ರೈತರ ಕಷ್ಟಗಳಿಗೆ ಸ್ಪಂದಿಸುತ್ತ, ಬಡಜನರಿಗೆ ಶಿP್ಷÀಣದ ಮೂಲಕ ತಮ್ಮ ಜೀವನವನ್ನು ಉಜ್ವಲಗೊಳಿಸುವ ಅವಕಾಶಗಳನ್ನು ಕಲ್ಪಿಸಿz್ದÁರೆ. ಈ ಭಾಗದ ಜನರಿಗೆ ಅತ್ಯಾಧುನಿಕ ಆರೋಗ್ಯ ಆರೈಕೆಯ ವೈದ್ಯಕೀಯ ಸೇವೆಗಳು ದೊರೆಯುವ ನಿಟ್ಟಿನಲ್ಲಿ ಕೆಎಲ್‍ಇ ಆಸ್ಪತ್ರೆಗಳನ್ನು ನಿರ್ಮಿಸಿ, ಸುಮಾರು 1700 ಹಾಸಿಗೆಗಳನ್ನು ಬಡಜನರಿಗೆ ಉಚಿತವಾಗಿ ಮೀಸಲಿರಿಸಿz್ದÁರೆ. ಡಾ.ಕೋರೆ ಅವರು ಇಡೀ ಸಮಾಜದ ಹಾಗೂ ಕರ್ನಾಟಕದ ಆಸ್ತಿಯಾಗಿz್ದÁರೆ ಹಾಗೂ ಅವರ ಹುಟ್ಟುಹಬ್ಬದ ಅಮೃತ ಮಹೋತ್ಸವವನ್ನು ನಾವೆಲ್ಲರೂ ಒಟ್ಟಾಗಿ ಯಶಸ್ವಿಯಾಗಿ ಮಾಡಬೇಕಾದುದು ನಮ್ಮ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಸಚೇತಕರು ಹಾಗೂ ಕೆಎಲ್‍ಇ ಸಂಸ್ಥೆಯ ನಿರ್ದೇಶಕರಾದ ಶ್ರೀ ಮಹಾಂತೇಶ ಕವಟಗಿಮಠ ಅವರು ಎಂದು ಹೇಳಿದರು.
ಕೇಂದ್ರ ಶಿP್ಷÀಣ, ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆಯ ಸನ್ಮಾನ್ಯ ಸಚಿವರಾದ ಧರ್ಮೇಂದ್ರ ಪ್ರಧಾನ ಅವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿz್ದÁರೆ ಮತ್ತು ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸನ್ಮಾನ್ಯ ಸಚಿವರಾದ ಪ್ರಹ್ಲಾದ ಜೋಶಿ, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ ಹಾಗೂ ಮಾಜಿ ಸಚಿವರು ಮತ್ತು ವೀರಶೈವ ಮಹಾಸಭೆಯ ಅಧ್ಯP್ಷÀರಾದ ಶಾಮನೂರು ಶಿವಶಂಕರಪ್ಪನವರು, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಗೌರವ ಅತಿಥಿಗಳಾಗಿ ಆಗಮಿಸಲಿz್ದÁರೆಂದು ಹೇಳಿದರು.
ಸಮಾರಂಭದಲ್ಲಿ ಬೆಳಗಾವಿಯ ಶಾಸಕರಾದ ಅನಿಲ ಬೆನಕೆ ಅವರು ಮಾತನಾಡಿ ಡಾ.ಪ್ರಭಾಕರ ಕೋರೆಯವರ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ನಾವೆಲ್ಲರೂ ಜೊತೆಯಾಗಿ ಆಚರಿಸುವುದೇ ಒಂದು ಸೌಭಾಗ್ಯ ಎಂದು ತಿಳಿಸಿದರು. ಮಾಜಿ ಶಾಸಕರಾದ ಸಂಜಯ ಪಾಟೀಲ ಅವರು ಮಾತನಾಡುತ್ತ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಮ್ಮಿಕೊಳ್ಳಲು ವಿವಿಧ ಸಮಿತಿಗಳನ್ನು ರಚಿಸಿ ಕಾರ್ಯಹಂಚಿಕೆ ಮಾಡಬೇಕೆಂದು ತಿಳಿಸಿದರು. ಕಾಗವಾಡದ ಮಾಜಿ ಶಾಸಕರಾದ ರಾಜು ಕಾಗೆ ಅವರು ಮಾತನಾಡಿ ಸಮಾಜದ ಮುಖಂಡರು ಸೇರಿಕೊಂಡು ಯಶಸ್ವಿಯಾಗಿ ಅಮೃತ ಮಹೋತ್ಸವ ಆಚರಿಸಲು ಎಲ್ಲರೂ ಒಗ್ಗಟ್ಟ್ಟಿನಿಂದ ಕಾರ್ಯನಿರ್ವಹಿಸೋಣ ಎಂದು ಹೇಳಿದರು. ವಿಜಯ ಮೋರೆಯವರು ಮಾತನಾಡಿ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಮುಖ್ಯಮಂತ್ರಿ ಹಾಗೂ ಸಚಿವರನ್ನು ಕೂಡ ಆಮಂತ್ರಿಸಬೇಕೆಂದು ತಿಳಿಸಿದರು. ಸಭೆಯಲ್ಲಿ ನ್ಯಾಯವಾದಿಗಳಾದ ಎಂ.ಬಿ.ಜಿರಲಿ ಅವರು ಮಾತನಾಡಿ ಅಮೃತ ಮಹೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು, ಸಕಲಸಿದ್ಧತೆಗಳನ್ನು ಮಾಡಿಕೊಳ್ಳಲು ಹೇಳಿದರು. ಸಂಸ್ಥೆಯ ಅಧ್ಯP್ಷÀರು ಹಾಗೂ ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರು ಮಾತನಾಡಿ ಪಕ್ಷಾತೀತವಾಗಿ ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸಲಹೆಗಳನ್ನು ನೀಡಿದರು.
ಸಭೆಯಲ್ಲಿ ರಾಯಬಾಗದ ಶಾಸಕರಾದ ಡಿ.ಎಂ.ಐಹೊಳೆ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಮಾಜಿ ಶಾಸಕರಾದ ಜಗದೀಶ ಮೆಟಗುಡ್, ಮಾಜಿ ಸಂಸದರಾದ ಅಮರಸಿಂಹ ಪಾಟೀಲ, ಗೋಕಾಕದ ಅಶೋಕ ಪೂಜಾರಿ, ರಾಮಣ್ಣ ಹುಕ್ಕೇರಿ, ವಿವಿಧ ತಾಲೂಕುಗಳಲ್ಲಿನ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.
ಕೆಎಲ್‍ಇ ಸಂಸ್ಥೆಯ ಅಧ್ಯP್ಷÀರು, ಉಪಾಧ್ಯP್ಷÀರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಸಭೆಯಲ್ಲಿ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಕೆಎಲ್‍ಇ ಸಂಸ್ಥೆಯ ಪದಾಧಿಕಾರಿಗಳು, ಜಿಲ್ಲೆಯ ಸಕ್ಕರೆ ಕಾರಖಾನೆಗಳ ನಿರ್ದೇಶಕ ಮಂಡಳಿಯ ಸದಸ್ಯರು, ಡಾ.ಪ್ರಭಾಕರ ಕೋರೆ ಸಹಕಾರಿ ಕ್ರೆಡಿಟ್ ಸೌಹಾರ್ದ ಸಂಸ್ಥೆಯ ಪದಾಧಿಕಾರಿಗಳು ಮೊದಲ್ಗೊಂಡು ಸುಮಾರು 250ಕ್ಕೂ ಹೆಚ್ಚು ಗಣ್ಯರು ಉಪಸ್ಥಿತರಿದ್ದರು.///////