Belagavi News In Kannada | News Belgaum

ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ ಗಂಟುರೋಗದಿಂದ ದನಗಳು  ಮೃತಪಟ್ಟರೆ ಪಟ್ಟರೆ 20 ಸಾವಿರ ರೂ.ಗಳ ಪರಿಹಾರ ಒದಗಿಸಲಾಗುವುದು ಹಾಗೂ  ಗಂಟು ರೋಗಕ್ಕೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಘೋಷಿಸಿರುವುದಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
 ಜಾನುವಾರುಗಳ ಗಂಟುರೋಗ ಸಮಸ್ಯೆ ಕುರಿತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಸರಕಾರದ ಗಮನ ಸೆಳೆದಿದ್ದರು. ಸಮಸ್ಯೆ ತೀರಾ ಗಂಭೀರವಾಗಿದ್ದು, ರಾಜ್ಯ ಸರಕಾರ ಮಧ್ಯ ಪ್ರವೇಶಿಸಬೇಕು. ಜಾನುವಾರುಗಳು ಮೃತಪಟ್ಟರೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದರು. ಸಮಸ್ಯೆ ಗಂಭೀರತೆಯನ್ನು ಅವರು ತೆರೆದಿಟ್ಟಿದ್ದರು.
ಇದಕ್ಕೆ ತಕ್ಷಣ ಸ್ಪಂದಿಸಿ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಲಕ್ಷ್ಮೀ ಹೆಬ್ಬಾಳಕರ್ ರೈತರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ. ಚಿಕಿತ್ಸಾ ವೆಚ್ಚವನ್ನು ಸಂಪೂರ್ಣ ಭರಿಸುವ ಮತ್ತು ಇದಕ್ಕಾಗಿ ವಿಶೇಷ ತಂಡವನ್ನು ಕಳಿಸುವ ಭರವಸೆ ನೀಡಿದ್ದಕ್ಕಾಗಿ ಸಹ ಮುಖ್ಯಮಂತ್ರಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.//////