Belagavi News In Kannada | News Belgaum

ಅ.9  ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಬೆಳಗಾವಿ : ಜಿಲ್ಲಾಡಳಿತ ಜಿಲ್ಲಾ ಪಂಚಾಯಿತ ಮತ್ತು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರವಿವಾರ (ಅ.9) ಬೆಳಿಗ್ಗೆ 9.30 ಗಂಟೆಗೆ ಕೋಟೆ ಕೆರೆಯಿಂದ ಕುಮಾರ ಗಂಧರ್ವ ರಂಗ ಮಂದಿರದ ವರೆಗೆ ಭಾವಚಿತ್ರ ಭವ್ಯ ಮೆರವಣಿಗೆ ನಡೆಯಲ್ಲಿದೆ.

ಬೆಳಿಗ್ಗೆ 11.30 ಗಂಟೆಗೆ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡಯಲಿದೆ. ಜಿಲ್ಲಾ ಉಸ್ತವಾರಿ ಸಚಿವರು ಜಲಸಂಪನ್ಮೂಲ (ಭಾರಿ ಮತ್ತು ಮಧ್ಯಮ) ನಿರಾವರಿ ಸಚಿವರಾದ ಗೋವಿಂದ ಕಾರಜೋಳ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಶಾಸಕರಾದ ಅನಿಲ ಬೆನೆಕೆ ಅಧ್ಯಕ್ಷತೆ ವಹಿಸಿಲಿದ್ದಾರೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪ್ರೋ.ದೊಡ್ಡನಗೌಡ ಪಾಟೀಲ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ್. ಎಚ್.ವಿ, ಜಿಲ್ಲಾ ಪೊಲೀಸ್ ಆಯುಕ್ತರಾದ ಡಾ. ಎಂ. ಬಿ. ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಸಂಜೀವ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಉಮಾ ಸಾಲಿಗೌಡರ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಬಸವರಾಜ ಕುರಿಹುಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.//////