Belagavi News In Kannada | News Belgaum

ರಾಣಿ ಚನ್ನಮ್ಮ ಜಯಂತಿ ಆಚರಣೆ ಪೂರ್ವಭಾವಿ ಸಭೆ

ಬೆಳಗಾವಿ : ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ(ಅ.14) ಕಿತ್ತೂರು ಚನ್ನಮ್ಮ ಜಯಂತಿ ಆಚರಣೆಯ ಸಿದ್ಧತೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಅರ್ಥಪೂರ್ಣ ಆಚರಣೆ:

ಅಕ್ಟೋಬರ್ 23 ರಂದು ಜಿಲ್ಲಾ ಮಟ್ಟದ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಚನ್ನಮ್ಮ ಅವರ ಬದುಕು, ವ್ಯಕ್ತಿತ್ವವನ್ನು ಸ್ಮರಿಸುವುದೊಂದಿಗೆ ಅರ್ಥಪೂರ್ಣವಾಗಿ ಚನ್ನಮ್ಮ ಜಯಂತಿಯನ್ನು ಆಚರಿಸುವುದಕ್ಕೆ ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಅದ್ಧೂರಿ ಮೆರಣಿಗೆಗೆ ಮನವಿ:

ಚನ್ನಮ್ಮ ಜಯಂತಿ ಹಿನ್ನೆಲೆ ನಗರದಲ್ಲಿ ಪ್ರಮುಖ ವೃತ್ತಗಳಲ್ಲಿ ಚನ್ನಮ್ಮ ಭಾವಚಿತ್ರವಿರುವ ವಾಹನ, ಕಲಾತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ ನಡೆಸಬೇಕೆಂದು ಸಭೆಯಲ್ಲಿ ಭಾಗವಹಿಸಿದ್ದ ಪ್ರಮುಖರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸಲಾಗುವುದು ಎಂದು ಹೇಳಿದರು.

ಪ್ರಮುಖ ವೃತ್ತಗಳು, ಮೂರ್ತಿಗಳು ಅಲಂಕಾರ:

ನಗರದಲ್ಲಿರುವ ಚನ್ನಮ್ಮ ವೃತ್ತ, ರಾಯಣ್ಣ ವೃತ್ತ ಸೇರಿದಂತೆ ಪ್ರಮುಖ ವೃತ್ತ, ಹಾಗೂ ಐತಿಹಾಸಿಕ ಸಾಧಕರ ಮೂರ್ತಿಗಳನ್ನು ಜಯಂತಿ ಹಿನ್ನೆಲೆಯಲ್ಲಿ ವಿದ್ಯುದ್ದೀಪಗಳಿಂದ ಅಲಂಕಾರಗೊಳಿಸಲಾಗುವುದು. ಅಂದು (ಅ.23) ಕಾಕತಿ ಹಾಗೂ ಚನ್ನಮ್ಮ ವೃತ್ತದಲ್ಲಿರುವ ಚನ್ನಮ್ಮ ಪುತ್ಥಳಿಗೆ ಬೆಳಿಗ್ಗೆ ಮಾಲಾರ್ಪಣೆ ಮಾಡುವುದರೊಂದಿಗೆ ಗೌರವ ಸೂಚಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಉಪನ್ಯಾಸ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ:

ಚನ್ನಮ್ಮ ಜಯಂತಿ ಹಿನ್ನೆಲೆ ಚನ್ನಮ್ಮಳ ಐತಿಹಾಸಿಕ ಸಾಹಸಗಾಥೆ ಅರಿತುಕೊಳ್ಳುವುದಕ್ಕಾಗಿ ಅಂದು(ಅ.23) ನಗರದಲ್ಲಿರುವ ಕುಮಾರ ಗಂಧರ್ವ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಿಂದ ಉಪನ್ಯಾಸ ಹಾಗೂ ಸ್ಥಳೀಯ ಕಲಾವಿದರಿಂದ ಹಾಡು, ನೃತ್ಯ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಎಂದು ಅಪರ ಜಿಲ್ಲಾಧಿಕಾರಿ ಅವರು ಹೇಳಿದರು.
ಜಯಂತಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಬೇಕು. ಆ ಮೂಲಕ ಐತಿಹಾಸಿಕ ಹೋರಾಟಗಾರ್ತಿಯ ಕುರಿತು ಜಾಗೃತಿ ಮೂಡಿಸಬೇಕು. ಶಿಕ್ಷಣ ಇಲಾಖೆ ಈ ಬಗ್ಗೆ ಗಮನಹರಿಸಬೇಕು ಎಂದು ಸೂಚಿಸಿದರು.

ಕೃಷಿ ಮೇಳ ಆಯೋಜನೆಗೆ ಮನವಿ:

ಅ.23 ರಂದು ರೈತರನ್ನು ಪೆÇ್ರೀತ್ಸಾಹಿಸುವ ಉದ್ದೇಶದಿಂದ ಕೃಷಿ ಮೇಳ ಆಯೋಜಿಸಬೇಕು ಜೊತೆಗೆ 5 ಜನ ಕೃಷಿ ಸಾಧಕರನ್ನು ಗುರುತಿಸಿ ಸತ್ಕರಿಸುವ ಮೂಲಕ ಪೆÇ್ರೀತ್ಸಾಹಿಸಬೇಕು. ಹಳ್ಳಿಯ ಜನರನ್ನು ಹೆಚ್ಚಿನ ಮಟ್ಟದಲ್ಲಿ ಸೇರಿಸಲು ಕುಸ್ತಿ ಪಂದ್ಯವನ್ನೂ ಆಯೋಜಿಸಬೇಕು ಎಂದು ರೈತ ಮುಖಂಡ ಸಿದಗೌಡ ಮೋದಗಿ ಹೇಳಿದರು. ಈ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಮಹಿಳಾ ಸಾಧಕರ ಸತ್ಕಾರಕ್ಕೆ ಒತ್ತಾಯ:

ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆಗೈದ ಮಹಿಳೆಯರನ್ನು ಗುರ್ತಿಸಿ ಅವರನ್ನು ಈ ಜಯಂತಿ ಹಿನ್ನೆಲೆಯಲ್ಲಿ ಸತ್ಕರಿಸಬೇಕು. ಸತ್ಕರಿಸುವ ಮೂಲಕ ಜಿಲ್ಲೆಯ ಸ್ರ್ತೀ ಸಾಧಕರನ್ನು ಪೆÇ್ರೀತ್ಸಾಹಿಸಿ, ಗೌರವಿಸಬೇಕು ಎಂಬ ಸಲಹೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ನಾಡಹಬ್ಬ ಉತ್ಸವ ಸಮಿತಿಯ ಡಾ.ಸಿ.ಕೆ.ಜೋರಾಪುರ, ಬಸನಗೌಡ ಪಾಟೀಲ, ಹಿರಿಯ ಸಾಹಿತಿ ಯ.ರು ಪಾಟೀಲ, ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ, ಎಂ.ವೈ. ಮೆಣಸಿನಕಾಯಿ, ನ್ಯಾಯವಾದಿ ಬಸರವಾಜ ರೊಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.//////