Belagavi News In Kannada | News Belgaum

ಎಐಸಿಸಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಸನ್ಮಾನಿಸಿದರು.

ದೆಹಲಿಯ ಖರ್ಗೆ ಅವರ ನಿವಾಸದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಶುಭ ಕೋರಿ  ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದು, ನಮಗೆ ಬಹಳ ಖುಷಿಯಾಗಿದೆ. ರಾಜ್ಯದಲ್ಲಿಯೂ ಪಕ್ಷಕ್ಕೆ ಇನ್ನಷ್ಟು ಶಕ್ತಿ ಬಂದಂತಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವೀರಕುಮಾರ ಪಾಟೀಲ, ಮಾಜಿ ಸಂಸದ ಎಂ. ಚಂದ್ರಪ್ಪ, ಶಾಸಕರಾದ ಟಿ. ರಘುಮೂರ್ತಿ, ಲಕ್ಷ್ಮಣರಾವ್ ಚಿಂಗಳೆ, ಸುನೀಲ್ ಹಣಮನ್ನವರ್ ಸೇರಿದಂತೆ ಇತರೆ ರಾಜ್ಯದ ನಾಯಕರು ಇದ್ದರು.