Belagavi News In Kannada | News Belgaum

67ನೇ ಕರ್ನಾಟಕ ರಾಜ್ಯೋತ್ಸವ; ಸುವರ್ಣಸೌಧದಲ್ಲಿ ಕೋಟಿ ಕಂಠ ಗಾಯನ

ಪ್ರತಿ ತಾಯಿ ಕನ್ನಡತಿಯೇ ಆಗಿರಲಿ: ಸಚಿವೆ ಶಶಿಕಲಾ ಜೊಲ್ಲೆ

ಪ್ರತಿ ತಾಯಿ ಕನ್ನಡತಿಯೇ ಆಗಿರಲಿ: ಸಚಿವೆ ಶಶಿಕಲಾ ಜೊಲ್ಲೆ

ಬೆಳಗಾವಿ, ಅ.28: ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಭಿವೃದ್ದಿಗಾಗಿ ಆಧುನಿಕ ವಾತಾವರಣಕ್ಕೆ ಒಗ್ಗಬೇಕಾಗುತ್ತದೆ. ಆದರೆ ಅದೇ ಕಾರಣಕ್ಕಾಗಿ ನಾಡು, ನುಡಿ, ಸಂಸ್ಕøತಿ ಮರೆತು ಮೂಢರಾಗದೇ ನಮ್ಮತನದ ಅಭಿಮಾನವನ್ನು ಮೆರೆಯಲೇಬೇಕಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶುಕ್ರವಾರ (ಅ.28) ಬೆಳಿಗ್ಗೆ 11 ಗಂಟೆಗೆ ಸುವರ್ಣ ಸೌಧದ ಆವರಣದಲ್ಲಿ ಆಯೋಜಿಸಲಾಗಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಮಗುವಿಗೆ ಎದೆಹಾಲು ಕುಡಿಸಲಾರಳು ಆಧುನಿಕ ತಾಯಿ ಇವಳಯ್ಯ..ಬಾಟಲಿ ಹಾಲು ಕುಡಿಸಿ ಚಾಕಲೇಟ್ ತಿನ್ನಿಸಿ ಪಾಪ್ ಸಾಂಗ್ ಹಾಡುವಳಯ್ಯ..’ ಎಂದು ಜನಪದ ಗೀತೆ ಹಾಡುವ ಮೂಲಕ ಸಚಿವೆ ಶಶಿಕಲಾ ಜೊಲ್ಲೆ ಅವರು ಎಲ್ಲೆ ಇದ್ದರೂ, ಹೇಗೆ ಇದ್ದರೂ ಕನ್ನಡದ ಪ್ರತಿ ತಾಯಿಯೂ ಕನ್ನಡತಿಯೇ ಆಗಿರಬೇಕು ಎಂದು ಅಭಿಪ್ರಾಯಪಟ್ಟರು.

ಅತಿಥಿಗಳಾಗಿ ಮಾತನಾಡಿದ ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಅವರು, ನಾಡು, ನುಡಿ ವಿಚಾರವಾಗಿ ಅಭಿಮಾನ ಬರೀ ಕೂಗಾಟ, ಪ್ರತಿಭಟನೆಗೆ ಸೀಮಿತವಾಗಬಾರದು ಬದಲಾಗಿ ಪ್ರತಿ ಕ್ಷಣವೂ ಅದನ್ನು ಜೀವಿಸಬೇಕು ಎಂದು ಹೇಳಿದರು.

ಏಕಕಾಲಕ್ಕೆ ನಾಡಗೀತೆ ಪ್ರಸ್ತುತ:

ಕಾರ್ಯಕ್ರಮ ಆರಂಭಕ್ಕೂ ಮುಂಚಿತವಾಗಿ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳಿಂದ ಸಾವಿರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಂಗೀತ ಶಿಕ್ಷಕ ವಿನಾಯಕ ಮೋರೆ ನೇತೃತ್ವದಲ್ಲಿ ಏಕಕಾಲಕ್ಕೆ ನಾಡಗೀತೆ ಪ್ರಸ್ತುತ ಪಡಿಸಿದರು.

ನಾಡ ದೇವಿಗೆ ಕೋಟಿ ಕಂಠದಾರತಿ:

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾ ಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳನ್ನು ಪ್ರಸ್ತುತ ಪಡಿಸುವ ಮೂಲಕ ವಿದ್ಯಾರ್ಥಿ, ವಿದ್ಯಾರ್ಥಿನಿ, ಅಧಿಕಾರಿಗಳು ಸಂಗೀತ ಶಿಕ್ಷಕ ವಿನಾಯಕ ಮೋರೆ ನೇತೃತ್ವದಲ್ಲಿ ಭುವನೇಶ್ವರಿಗೆ ಕೋಟಿ ಕಂಠದಾರತಿ ಬೆಳಗಿದರು.

ಕನ್ನಡ ಸಂಕಲ್ಪ:

ಕನ್ನಡ ನೆಲ, ಜಲ, ಜನ, ಸಂಸ್ಕೃತಿ, ಪರಂಪರೆಯ ರಕ್ಷಣೆಗೆ ಬದ್ಧವಾಗಿರುತ್ತೇವೆ ಎಂದು ಸಾವಿರಾರು ಕನ್ನಡ ಮನಸುಗಳ ಒಕ್ಕೊರಲಿನಿಂದ ಪ್ರತಿಜ್ಞೆ ಮಾಡಿದರು.

ಆಗಸದಲ್ಲಿ ಬಲೂನ್ ಹಾರಾಟ:

ಕೋಟಿ ಕಂಠ ಗಾಯನದ ಯಶಸ್ವಿಪೂರ್ಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಎಲ್ಲ ಗಣ್ಯರ ಸಮ್ಮುಖದಲ್ಲೇ ಬಲೂನ್ಗಳ ಎರಡು ಗುಚ್ಛಗಳನ್ನ ಆಗಸದೆತ್ತರಕ್ಕೆ ಹಾರಿ ಬಿಡಲಾಯಿತು. ಹಳದಿ ಕೆಂಪು ಬಣ್ಣದ ಬಲೂನ್ ಗಳು ಆಸದರಲ್ಲಿ ಬಹಳ ವರ್ಣರಂಜಿತವಾಗಿ ತೇಲಾಡಿದವು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಪಂ ಸಿಇಒ ದರ್ಶನ ಹೆಚ್ ವಿ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಸಂಜೀವ ಪಾಟೀಲ, ಜಿಲ್ಲಾ ಪೆÇಲೀಸ್ ದಂಡಾಧಿಕಾರಿ ಬೋರಲಿಂಗಯ್ಯ, ಡಿಸಿಪಿ ರವೀಂದ್ರ ಗಡಾದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸಾವಿರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಜಿಲ್ಲೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಲಿದ್ದರು. ಸುನೀತಾ ದೇಸಾಯಿ ನಿರೂಪಿಸಿ ವಂದಿಸಿದರು.

67ನೇ ಕರ್ನಾಟಕ ರಾಜ್ಯೋತ್ಸವ; ಕೋಟಿ ಕಂಠ ಗಾಯನ ಕಾರ್ಯಕ್ರಮ

 

ಕೋಟಿ ಕಂಠ ಗಾಯನದಲ್ಲಿ ಕನ್ನಡ ಅನುರಣನ

 

ಕೋಟಿಕಂಠ ಗಾಯನ “ನನ್ನ ನಾಡು ನನ್ನ ಹಾಡು” ಕಾರ್ಯಕ್ರಮದಲ್ಲಿ ಆರು ಹಾಡುಗಳನ್ನು ರಾಜ್ಯಾದ್ಯಂತ ಏಕ ಕಂಠದಲ್ಲಿ ಕೋಟಿಕಂಠ ಗಾಯನದ ಮೂಲಕ ಕನ್ನಡ ಇತಿಹಾಸ ಸೃಷ್ಟಿಸಲು ನಾವೆಲ್ಲರೂ ಕೈಜೊಡಿಸೋಣ ಎಂದು ಮಹಾನಗರ ಪಾಲಿಕೆ ಅಯುಕ್ತರಾದ ರುದ್ರೇಶ ಘಾಳಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶುಕ್ರವಾರ (ಅ.28) ಜಿಲ್ಲಾ ಕ್ರೀಡಾಂಗಣದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.

ನಾಡಿನೆಲ್ಲೆಡೆ 10 ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ, ರಾಜ್ಯದ ಮೂಲೆ ಮೂಲೆಯಲ್ಲಿ, ಗ್ರಾಮ ಗ್ರಾಮಗಳಲ್ಲಿ ಒಂದು ಕೋಟಿಗೂ ಹೆಚ್ಚು ಕಂಠಗಳಲ್ಲಿ ಕನ್ನಡ ಗಾಯನ ಮೊಳಗಲಿದೆ, ಕೋಟಿ ಕಂಠದಲ್ಲಿ ನಮ್ಮ ಕಂಠಗಳನ್ನು ಜೋಡಿಸುವ ಮೂಲಕ ಕೋಟಿ ಕಂಠ ಗಾಯನವನ್ನು ಯಶಸ್ವಿಗೊಳಿಸಲಾಗುವುದು ಎಂದರು.

ಕುವೆಂಪು ವಿರಚಿತ ನಾಡಗೀತೆಯಾದ ಜಯ ಭಾರತ ಜನನಿಯ ತನುಜಾತೆ, ಹುಯೀಲಗೋಳ ನಾರಾಯಣರಾಯರು ರಚಿಸಿದ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ರಚಿಸಿದ ಬಾರಿಸು ಕನ್ನಡ ಡಿಂಡಿಮ, ಡಾ.ಡಿ.ಎಸ್.ಕರ್ಕಿ ರಚಿಸಿದ ಹಚ್ಚೇವು ಕನ್ನಡ ದೀಪ, ಚನ್ನವೀರ ಕಣವಿ ರಚಿಸಿದ ವಿಶ್ವವಿನೂತನ ವಿದ್ಯಾಚೇತನ ಹಾಗೂ ಹಂಸಲೇಖ ಅವರು ರಚಿಸಿದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹೀಗೆ ಒಟ್ಟು ಆರು ಕನ್ನಡ ಹಾಡುಗಳನ್ನು ಹಾಡುವ ಮೂಲಕ 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಆಯೋಜಿಸಿದ ಕೋಟಿಕಂಠ ಗಾಯನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ ಬೆನಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮಹಾನಗರ ಪಾಲಿಕೆಯ ಉಪ ಆಯುಕ್ತ(ಆಡಳಿತ)ರಾದ ಭಾಗ್ಯಶ್ರೀ ರಾ. ಹುಗ್ಗಿ ಅವರು ಸ್ವಾಗತಿಸಿದರು.

ಸರ್ವಮಂಗಳ ಅರಳಿಮಟ್ಟಿ ಅವರು ಕಾರ್ಯಕ್ರಮ ನಿರೂಪಿಸಿದರು. ಇದಲ್ಲದೇ ಮಕ್ಕಳಿಗೆ ಸಂಕಲ್ಪ ವಿಧಿಯನ್ನು ಬೋಧಿಸಿದರು. ಕೋಟಿ ಕಂಠ ಗಾಯನದ ಮುಖ್ಯ ಗಾಯಕರಾಗಿ ನಯನಾ ಗಿರಿಗೌಡರ ಮತ್ತು ತಂಡದವರು ಭಾಗವಹಿಸಿದ್ದರು.

ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾದ ಪ್ರೀತಿಮ್ ನಸಲಾಪುರೆ, ಮಹಾನಗರ ಪಾಲಿಕೆ ಕಂದಾಯ ಉಪಾ ಆಯುಕ್ತ ಪ್ರಶಾಂತ ಹುನಗುಂದಿ, ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿಗಳು ಸಂಜಯ ಡುಮ್ಮಗೋಳ, ಟಿ.ಪಿ.ಓ ಅಧಿಕಾರಿ ಬಿ.ವಿ. ಹಿರೇಮಠ, ಬೆಳಗಾವಿ ತಹಶಿಲ್ದಾರರಾದ ಆರ್.ಬಿ.ಕುಲಕರ್ಣಿ, ಮಹಾನಗರ ಪಾಲಿಕೆ ಅಭಿವೃದ್ದಿ ಉಪ ಆಯುಕ್ತರಾದ ಲಕ್ಷ್ಮೀ ನಿಪ್ಪಾಣಿಕರ ಹಾಗೂ ಬೆಳಗಾವಿ ನಗರದ ಸರ್ಕಾರಿ ಮತ್ತು ಖಾಸಗಿ ಶಾಲಾ- ಕಾಲೇಜಗಳ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಜನರು ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕ ರಾಜ್ಯೋತ್ಸವ: ನ.1 ರಂದು ಎಲ್ಲ ಧಾರ್ಮಿಕ ಕೇಂದ್ರಗಲ್ಲಿ ಪ್ರಾರ್ಥನೆ

 

ನವೆಂಬರ್ 1 ರಂದು 67ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಸಾರ್ವಜನಿಕ ದೇವಾಲಯ, ಮಂದಿರ, ಮಸೀದಿ, ಚರ್ಚು, ಗುರುದ್ವಾರ, ಬೌದ್ಧ ಮಂದಿರ, ಜೈನ್ ಬಸಿದಿಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸುವಂತೆ ಸಾರ್ವಜನಿಕಕ ಸಂಸ್ಥೆಗಳಲ್ಲಿ ಎಲ್ಲ ಪದಾಧಿಕಾರಿಗಳು ಪ್ರಾರ್ಥನೆ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///