Belagavi News In Kannada | News Belgaum

ಹೂಲಿಕಟ್ಟಿ ಶೀಥಲಿಕರಣ ಕೇಂದ್ರದ ಶಂಕುಸ್ಥಾಪನೆ: ಅ.30ರಂದು

 

ಬೆಳಗಾವಿ, ಅ.28 : ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಿಂದ ರವಿವಾರ (ಅ.30) ಮಧ್ಯಾಹ್ನ 1.45ಕ್ಕೆ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್ ನಲ್ಲಿ ಹೂಲಿಕಟ್ಟಿ ಶೀಥಲಿಕರಣ ಕೇಂದ್ರದ ಶಂಕುಸ್ಥಾಪನಾ ಸಮಾರಂಭ ನಡೆಯಲಿದೆ.

ಚನ್ನಮ್ಮನ ಕಿತ್ತೂರಿನ ಶಾಸಕ ಮಹಾಂತೇಶ ದೊಡಗೌಡರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಿತ್ತೂರು ಕಲ್ಮಠದ ರಾಜಗುರು ಸಂಸ್ಥಾನ ಮಡಿವಾಳ ರಾಜಯೋಗಿಂದ್ರ ಸ್ವಾಮಿಗಳು, ನಿಚ್ಚಣಕಿ ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಹಾಸ್ವಾಮಿಗಳು, ನಯಾನಗರ ಪುಣ್ಯಾಶ್ರಮದ ಸುಖದೇವಾನಂದ ಶ್ರೀಗಳು, ಹೂಲಿಕಟ್ಟಿ ಹೊಸಕೇರಿ ಮಠದ ಲಿಂಗಾನಂದ ಸ್ವಾಮೀಜಿ ದಿವ್ಯ ಸಾನಿಧ್ಯವನ್ನು ವಹಿಸಿಕೊಳ್ಳಲಿದ್ದಾರೆ.

ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ನಿಯಮಿತದ ಅಧ್ಯಕ್ಷ ವಿವೇಕ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಕಹಾಮ ಮತ್ತು ಬೆಹಾಮ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಘನ ಉಪಸ್ಥಿತಿ, ಕಹಾಮ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ್ ಕೆ.ಸಿ.ಎಸ್ ಅಂಬಡಗಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಶ್ರೀಧರ್ ಅಕ್ಕಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಸದಸ್ಯರು, ಪದಾಧಿಕಾರಿಗಳು, ಇನ್ನಿತರ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.