Belagavi News In Kannada | News Belgaum

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಬೆಳಗಾವಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರ/ಸ್ನಾತಕೋತ್ತರ ಪದವೀಧರರಿಗೆ ಬೆಳಗಾವಿ ಜಿಲ್ಲಾ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ನಲ್ಲಿಸುವುದು.
ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುವುದು.
ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ.
ಅರ್ಜಿ ಸಲ್ಲಿಸಲು ನವೆಂಬರ್ 14, 2022 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಭವನ, ನ್ಯಾಯಾಲಯ ಆವರಣ ಅಥವಾ ಮೊಬೈಲ್ ಸಂಖ್ಯೆ-9448589639 ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.//////