Belagavi News In Kannada | News Belgaum

50 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಪ್ರಥಮ ದರ್ಜೆ ಸಹಾಯಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಆರೋಗ್ಯ ಭವನದ ಎಫ್‌ಡಿಎ ಸುಮಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಡತ ವಿಲೇವಾರಿ ಮಾಡಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಎಫ್.ಡಿ.ಎ. ಸುಮಂತ್ ಬೇಡಿಕೆ ಇಟ್ಟಿದ್ದರು. ಈ ಹಣದಲ್ಲಿ 50,000 ರೂ. ಲಂಚ ಸ್ವೀಕರಿಸುವಾಗ ಸುಮಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿ.ವೈ.ಎಸ್.ಪಿ. ಸತೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.//////