Belagavi News In Kannada | News Belgaum

ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ರಾಜೇಂದ್ರ ಕಲಘಟಗಿ

ಬೆಳಗಾವಿ: ಸಾರ್ವಜನಿಕರ ಸೇವೆಯಲ್ಲಿ ಪ್ರತಿದಿನ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಯ ಒತ್ತಡ ನಿವಾರಣೆಗೆ ಹಾಗೂ ಸದೃಢ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆಗಳು ಸಹಕಾರಿ ಎಂದು ಸ್ವಾತಂತ್ರ್ಯ ಹೋರಾಟಗಾರ ರಾಜೇಂದ್ರ ಕಲಘಟಗಿ ಹೇಳಿದರು.
ಶುಕ್ರವಾರ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಎರಡೂ ದಿನದ ಬೆಳಗಾವಿ ಜಿಲ್ಲಾ ಪೊಲೀಸ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿ,ಪೊಲೀಸರು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ, ಕರ್ತವ್ಯದ ಅವಧಿಯಲ್ಲಿ ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ.  ಒತ್ತಡ ರಹಿತವಾಗಿ ಆರೋಗ್ಯಕರ ಜೀವನ ನಡೆಸಲು ಕ್ರೀಡೆಗಳು ಸಹಕಾರಿ. ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಪ್ರತಿಭೆ ಪ್ರದರ್ಶಿಸಿ ವೃತ್ತಿ ಬದುಕಿನಲ್ಲಿ ಸಾಧನೆ ಮಾಡಬಹುದು ಎಂದರು.

ಪೊಲೀಸರು ವೃತ್ತಿ‌ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಅನುಭವಿಸಿ ಕೆಲಸ ಮಾಡುತ್ತಾರೆ. ಸಂಚಾರ ಸಮಸ್ಯೆ ಬಗೆ ಹರಿಸುವುದು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸೇರಿದಂತೆ ಎಲ್ಲರಲ್ಲಿಯೂ ಮಂಚೂಣಿಯಲ್ಲಿರುತ್ತಾರೆ. ಅವರ ಕುಟುಂಬವನ್ನು ಲೆಕ್ಕಿಸದೆ ಸಮಾಜಕ್ಕೆ ಕೆಲಸ ನಿರ್ವಹಿಸುತ್ತಿರುವ ಪೊಲೀಸರಿಗೆ ಹೆಮ್ಮೆಯ ಸೆಲ್ಲೂಟ್ ಎಂದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ, ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ.ಬೋರಲಿಂಗಯ್ಯ, ಹೆಚ್ವುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ‌ ನಂದಗಾವಿ, ಡಿಸಿಪಿಗಳಾದ ಸ್ನೇಹಾ ಪಿ.ವಿ., ರವೀಂದ್ರ ಗಡಾದಿ ಸೇರಿದಂತೆ ಇ ಇನ್ನಿತರರು ಉಪಸ್ಥಿತರಿದ್ದರು./////