Belagavi News In Kannada | News Belgaum

ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ತಾಯಿ

ಬೆಳಗಾವಿ:   ಕೌಂಟುಬಿಕ ಕಲಹದಿಂದ ಜೀವನದಲ್ಲಿ ಜಿಗುಪ್ಸೆಗೊಂಡು  ಎರಡು ಮಕ್ಕಳೊಂದಿಗೆ ತಾಯಿ ಸಾವಿನ ಹಾದಿ ಹಿಡಿದಿರುವ ಘಟನೆ  ಸವದತ್ತಿಯಲ್ಲಿ ನಡೆದಿದ್ದು, ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿಶವ ಪತ್ತೆಯಾಗಿವೆ. ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ತನುಜಾ ಪರಸಪ್ಪ ಗೋಡಿ(32), ಸುದೀಪ್(4), ರಾಧಿಕಾ(3) ಶವವಾಗಿ ಸಿಕ್ಕರು. ಚುಂಚನೂರು ಗ್ರಾಮದ ನಿವಾಸಿ ತನುಜಾ ಮಕ್ಕಳನ್ನ ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಸವದತ್ತಿ ತಾಲೂಕು ಆಸ್ಪತ್ರೆಗೆ ಶವಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.//////