ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಓರ್ವ ಶಿಕ್ಷಕ ಸೇರಿ ಇಬ್ಬರು ಅರೆಸ್ಟ್

ರಾಯಚೂರು: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ಎರಡು ಪೋಕ್ಸೊ ಪ್ರಕರಣ ದಾಖಲಾಗಿದ್ದು, ಇಬ್ಬರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ.
ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಿಕ್ಷಕನೊಬ್ಬ 13 ವರ್ಷದ ವಿದ್ಯಾರ್ಥಿನಿಯೊಂದಿಗೆ ಮೂರು ದಿನ ನಾಪತ್ತೆಯಾಗಿದ್ದ. ಇದೀಗ ಅತಿಥಿ ಶಿಕ್ಷಕ ಪಾಲೇಶ್ (32) ಸಿರವಾರ ಪೊಲೀಸರ ಅತಿಥಿಯಾಗಿದ್ದಾನೆ.
ಇನ್ನೂ ದೇವದುರ್ಗ ತಾಲೂಕಿನಲ್ಲಿ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅಯ್ಯಪ್ಪ (45) ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮಗುವನ್ನು ಮನೆಗೆ ಬಿಡುವ ನೆಪದಲ್ಲಿ ಕರೆದೊಯ್ದ ಕಾಮುಕ ಅತ್ಯಾಚಾರಕ್ಕೆ ಯತ್ನಿಸಿದ್ದ, ಮಗು ಕೂಗಾಡಿ ಗಲಾಟೆ ಮಾಡಿದಾಗ ಯಾರಿಗೂ ಹೇಳದಂತೆ ಕೊಲೆ ಬೆದರಿಕೆ ಹಾಕಿದ್ದ. ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದ ಜಾಲಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎರಡೂ ಪ್ರಕರಣಗಳ ಆರೋಪಿಗಳು ಸೆರೆಸಿಕ್ಕಿದ್ದು, ಬಾಲಕಿಯರ ರಕ್ಷಣೆ ಮಾಡಲಾಗಿದೆ. ಸಿರವಾರ ಹಾಗೂ ಜಾಲಹಳ್ಳಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.//////