Belagavi News In Kannada | News Belgaum

ಬೆಳಗಾವಿ ಅಧಿವೇಶನ ವೇಳೆ ಕಿತ್ತೂರು ರಾಣಿ ಚನ್ನಮ್ಮ ಹಾಗೂ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು: ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಳಗಾವಿ ಅಧಿವೇಶನ ವೇಳೆ ಸುವರ್ಣ ಸೌಧದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಎರಡೂ ಪ್ರತಿಮೆ ಸ್ಥಾಪನೆಗೆ ಆದೇಶ ಹೊರಡಿಸಲಾಗಿದೆ ಎಂದರು. ಗಡಿಯಲ್ಲಿ ಉದ್ವಿಗ್ನ ವಾತಾವರಣ ಸಂಬಂಧ ಮಹಾರಾಷ್ಟ್ರದ ಗೃಹ ಇಲಾಖೆ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಲು ಸೂಚಿಸಿದೆ.
ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು.ಎರಡೂ ರಾಜ್ಯಗಳ ಸಾಮರಸ್ಯ ಹದಗೆಡುವುದು ಬೇಡ. ಕರ್ನಾಟಕ ಬಸ್ಸು, ಜನರು ಹಾಗೂ ಆಸ್ತಿಗೆ ಸಂಪೂರ್ಣವಾದ ರಕ್ಷಣೆ ನೀಡಬೇಕು ಎಂದು ಹೇಳಿದರು.//////