Belagavi News In Kannada | News Belgaum

ಬೆಳಗಾವಿಗೆ ಹೋಗೊದನ್ನ ಯಾರು ತಡೆಯುತ್ತಾರೋ ನೋಡೋಣ: ನಾರಾಯಣಗೌಡ ಕಿಡಿ

ಧಾರವಾಡ: ಬೆಳಗಾವಿಯಲ್ಲಿ 1000 ಕನ್ನಡ ಬಾವುಟ ಹಾರಿಸುತ್ತೇವೆ. ಅದ್ಯಾರು ನಮ್ಮನ್ನು ತಡೆಯುತ್ತಾರೆ ನೋಡೋಣ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದರು.
ಧಾರವಾಡದಲ್ಲಿ ಮಾದ್ಯಮದವರೊಂದಿಗೆ ಪ್ರತಿಕ್ರಿಯಿಸಿರುವ ಅವರು, ಮಹಾರಾಷ್ಟ್ರ ಸಚಿವರಿಗೆ ಉತ್ತರಿಸಲೆಂದೇ 100 ವಾಹನಗಳಲ್ಲಿ ನಾವು ಬೆಳಗಾವಿಗೆ ಹೊರಟಿದ್ದೇವೆ. ಬೆಳಗಾವಿಯಲ್ಲಿ 1000 ಕನ್ನಡ ಬಾವುಟ ಹಾರಿಸುತ್ತೇವೆ. ಅದ್ಯಾರು ನಮ್ಮನ್ನು ತಡೆಯುತ್ತಾರೆ ನೋಡೋಣ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಸಚಿವರು ಪದೇ ಪದೇ ಕರ್ನಾಟಕವನ್ನು ಅವಮಾನಿಸುತ್ತಿದ್ದಾರೆ. ಅವರ ಹೇಳಿಕೆಗಳು ಕನ್ನಡಿಗರನ್ನು ಪ್ರಚೋದಿಸುತ್ತಿದೆ. ಬೆಳಗಾವಿಯಲ್ಲಿರುವ ಮರಾಠಿಗರನ್ನೂ ಪ್ರಚೋದಿಸುತ್ತಿದೆ. ಇದೆಲ್ಲದಕ್ಕೂ ಉತ್ತರ ಕೊಡಬೇಕಿದೆ ಎಂದು ಹೇಳಿದರು./////