ಬೆಳಗಾವಿಯಲ್ಲಿ ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಣೆ

ಬೆಳಗಾವಿ: ಡಾ.ಬಿ.ಆರ್ .ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಪಾಲಿಸುವ ಮೂಲಕ ಅವರು ಹಾಕಿಕೊಟ್ಟ ದಾರಿಯಲ್ಲಿ ಪ್ರತಿಯೊಬ್ಬರು ನಡೆಯುಬೇಕಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.
ಬೆಳಗಾವಿ ಜಿಲ್ಲಾಡಳಿತ ,ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಮತ್ತು ವಿವಿಧ ದಲಿತ ಸಂಘಟನೆಗಳ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿ,
ಡಾ. ಬಿ.ಆರ್. ಅಂಬೇಡ್ಕರ್ ಸ್ಮರಣೆಗಾಗಿ ಸ್ಮಾರಕ ,ಅಧ್ಯಯನ ಕೇಂದ್ರ , ಗ್ರಂಥಾಲಯ ನಿರ್ಮಾಣಕ್ಕೆ ಸರ್ಕಾರ ಅನುದಾನ ನೀಡಿದ್ದು ಕಾರ್ಯ ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದರು.
ಮಹಾನಗರ ಪಾಲಿಕೆ ಆಯುಕ್ತ ರುದ್ದೇಶ್ ಘಾಳಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಉಮಾ ಸಾಲಿಗೌಡರ ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಮಲ್ಲೇಶ ಕುರಂಗಿ, ಶಿವಪುತ್ರಪ್ಪ ಮೇತ್ರಿ , ಎಮ್ .ಆರ್ .ಕಲಪತ್ರಿ, ಸುಧೀರ ಚೌಗಲೆ, ಬಾಬು ಪೂಜಾರಿ, ಛಲವಾದಿ ಸಂಘಟನೆಯ ಜಿಲ್ಲಾಧ್ಯಕ್ಷ ಮೇತ್ರಿ ಸೇರಿದಂತೆ ದಲಿತ ಮುಖಂಡರು ಉಪಸ್ಥಿತರಿದ್ದರು. ನಂತರದಲ್ಲಿ ಶ್ರೀರಾಮಸೇನೆ ಹಿಂದುಸ್ತಾನದ ಅಧ್ಯಕ್ಷ ರಮಾಕಾಂತ ಕುಂಡುಸಕರ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಗೌರವ ಸಲ್ಲಿಸಿದರು.//////