Belagavi News In Kannada | News Belgaum

ಮತ್ತೆ ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗೆ ಕಪ್ಪು ಮಸಿ ಬಳಿದ ಮರಾಠಿ ಪುಂಡರು

ಬೆಳಗಾವಿ: ಮತ್ತೆ ಮಹಾರಾಷ್ಟ್ರದಲ್ಲಿ ಮರಾಠಿ ಭಾಷಿಕ ಪುಂಡರ ಅಟ್ಟಹಾಸ ಮುಂದುವರೆದಿದ್ದು, ಕರ್ನಾಟಕ ಬಸ್‌ಗೆ ಕಪ್ಪು ಮಸಿ ಬಳಿದು ಕೆಲವು ಮರಾಠಿ ಭಾಷಿಕರು ಮತ್ತೆ ತಮ್ಮ ಪುಂಡಾಟಿಕೆ ಮೆರೆದಿದ್ದಾರೆ. ಮಹಾರಾಷ್ಟ್ರದ ಫುಣೆ ಡಿಫೋದಲ್ಲಿರುವ ಕರ್ನಾಟಕ ಸೇರಿದ ೮ಕ್ಕೂ ಹೆಚ್ಚು ಬಸ್ಸಿಗೆ ಉದ್ಧವ್ ಠಾಕ್ರೆ ಬಣದ ಕಾರ್ಯಕರ್ತರು ಮಸಿ ಬಳಿದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕರವೇ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರದ ವಾಹನಗಳಿಗೆ ಕಲ್ಲು ತೂರಿ ಮಸಿ ಬಳಿದಿರುವದರಿಂದ ಫುಣೆಯಲ್ಲಿ ಉದ್ಧವ್‌ ಠಾಕ್ರೆ ಬಣದ ಕಾರ್ಯಕರ್ತರು ಕರ್ನಾಟಕದ ಬಸ್ಸಿನ ಮೇಲೆ ಜೈ ಮಹಾರಾಷ್ಟ್ರ ಎಂದು ಬರವಣಿಗೆ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ./////