ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನೆಗೆ ಹಾಗೂ ವಿವಿಧ ಕಾಮಗಾರಿಗಳ ಅಡಿಗಲ್ಲು ಸಮಾರಂಭಕ್ಕೆ ಆಗಮಿಸುವ ಕುರಿತು ಮುಖ್ಯಮಂತ್ರಿಗಳನ್ನು ಬೇಟಿ ಮಾಡಿದ ಶಾಸಕ ಅನಿಲ ಬೆನಕೆ

ಬೆಳಗಾವಿ : ದಿನಾಂಕ 16.12.2022 ರಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟಕರಾಗಿ ಆಗಮಿಸುವಂತೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ವಿನಂತಿಸಿ ಆಹ್ವಾನಿಸಿದರು.
ಭೀಮ್ಸ್ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ತಾಯಿ ಮಕ್ಕಳ ಆಸ್ಪತ್ರೆ ಮತ್ತು ಟ್ರೋಮಾ ಸೆಂಟರ್ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಸಮಾರಂಭ ಹಾಗೂ ಶೀತಿಲಗೊಂಡಿರುವ ನರ್ಸಿಂಗ್ ಕಾಲೇಜು ಮತ್ತು ನರ್ಸಿಂಗ್ ವಸತಿ ನಿಲಯದ ಪುನರ್ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡಬೇಕೆಂದು ಮನವಿಯನ್ನು ಮಾಡಿದರು. ಸನ್ಮಾನ್ಯ ಮುಖ್ಯಮಂತ್ರಿಗಳು ಈ ಎಲ್ಲ ಕಾಮಗಾರಿಗಳ ಉದ್ಘಾಟನೆಗೆ ಹಾಗೂ ಕಾಮಗಾರಿಗಳ ಅಡಿಗಲ್ಲು ಸಮಾರಂಭಕ್ಕೆ ಆಗಮಿಸುವುದಾಗಿ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.//////