ಬೆಳಗಾವಿಗೆ ನುಗ್ಗಲು ಯತ್ನಿಸಿದ ಪುಂಡರನ್ನ ವಶಕ್ಕೆ ಪಡೆದ ಪೊಲೀಸರು

ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಿದ್ದ ಮಹಾಮೆಳಾವ್ ಗೆ ಮಹಾರಾಷ್ಟ್ರದಿಂದ ಆಗಮಿಸಿರುವ ನೂರಾರು ಪುಂಡರನ್ನು ಬೆಳಗಾವಿಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಪೊಲೀಸರು ಹಾಗೂ ಮಹಾ ವಿಕಾಸ ಅಗಾಡಿ ಕಾರ್ಯಕರ್ತರ ನಡುವೆ ವಾಗ್ವಾದ ಮಾತಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೆಲ ಪುಂಡರನ್ನು ತಡೆಯುತ್ತಿದ್ದಂತೆ ಕೆಲ ಮಹಾ ಪುಂಡರು ಸೇತುವೆಯ ಮೇಲೆ ನಿಂತು ಭಾಷಣ ಮಾಡಲು ಆರಂಭಿಸಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಬೆಳಗಾವಿ, ನಿಪ್ಪಾಣಿ, ಬೀದರ್, ಬಾಲ್ಕಿ ಸಂಯುಕ ಮಾಹಾರಾಷ್ಟ್ರಕ್ಕೆ ಸೇರಿಸುವಂತೆ ಘೋಷಣೆ ಕೂಗಿದರು. ಈ ವೇಳೆ ೩೦ಕ್ಕೂ ಹೆಚ್ಚು ಪುಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.//////