Belagavi News In Kannada | News Belgaum

ರೈತರ ಸಾಲ ಮನ್ನಾ, ಸರ್ಕಾರ ಮನಸ್ಸು ಮಾಡಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ

ಸುವರ್ಣಸೌಧ (ಬೆಳಗಾವಿ): ಕೇಂದ್ರ ಸರ್ಕಾರ ಕಬ್ಬಿಗೆ ಮೋಸದ ಬೆಲೆ ನಿಗದಿ ಮಾಡಿದೆ. ಪ್ರತಿ ಟನ್‌ ಕಬ್ಬಿಗೆ 3500 ರೂ. ನೀಡಿಬೇಕು. ರೈತರ ಎಲ್ಲಾ ಸಾಲಮನ್ನಾ ಮಾಡಬೇಕೆಂದು ರೈತರು ಆಗ್ರಹಿಸಿದರು. ಬೆಳಗಾವಿಯ ಸುವರ್ಣಸೌಧದ ಎದುರು ರೈತರ ಹೋರಾಟ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಧರಣಿ ನಡೆಸಿದ ರೈತರು. ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು.

ವಿದ್ಯುಚ್ಛಕ್ತಿ ಖಾಸಗೀಕರಣ ಮಸೂದೆ ಕೈಬಿಡಬೇಕು ಕಳಸಾ- ಬಂಡೂರಿ ಕಾಮಗಾರಿಯನ್ನ ಕಾಲಮಿತಿಯೊಳಗೆ ಮುಗಿಸಬೇಕೆಂದು ಒತ್ತಾಯಿಸಿದರು. ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಆಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಸರ್ಕಾರ ರೈತ ವಿರೋಧಿ ನೀತಿ ಖಂಡಿಸಿದರು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಮಾತನಾಡಿ , ರೈತರ ಹೋರಾಟಕ್ಕೆ ಕಾಂಗ್ರೆಸ್‌ ಪಕ್ಷದಿಂದ ಬೆಂಬಲವಿದೆ.

ರೈತರ ವಿವಿಧ ಬೇಡಿಕೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ, ನಾವೂ ಕುರಿತು ಚರ್ಚೆ ಮಾಡಲಾಗುವುದು ಎಂದು ಹೇಳಿದರು. ಕಲಬುರಗಿ, ಬಾಗಲಕೋಟ ಹೋದಾಗ ರೈತರು ಪ್ರತಿಭಟನೆ ಮೂಲಕ ಗಮನ ಸೆಳೆಯುವ ಪ್ರಯತ್ನಗಳಾಗಿವೆ. ಕಾಂಗ್ರೆಸ್‌ ಪಕ್ಷ ನಿರಂತರವಾಗಿ ರೈತರ ಬೆನ್ನಿಗೆ ಇದೆ.

ಕಾಂಗ್ರೆಸ್‌ ಹಾಗೂ ಸಮ್ಮಿಶ್ರ ಸರ್ಕಾರ ಆಡಳಿತ ಅವಧಿಯಲ್ಲಿ ರೈತರ ಸಾಲ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಆಡಳಿತ ಅವಧಿ ರೈತರ ವಿಶ್ವಾಸದ ಮಹತ್ವದ ಯೋಜನೆಯನ್ನು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮಾರು 30 ಸಾವಿರ ಕೋಟಿ ರೂ. ಸಾಲ ಮನ್ನಾಮಾಡಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್‌ ಆಡಳಿತ ಅವಧಿ 70 ಸಾವಿರ ಕೋಟಿ ರೂ. ದೇಶದ ಸಾಲ ಮನ್ನಾ ಮಾಡಿ, ಅನ್ನದಾತರ ಪರವಾಗಿ ನಿಂತಿದ್ದೆವೆ ಎಂದು ಹೇಳಿದರು. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಸಾಲ ಮನ್ನಾ ಮಾಡಲು ಸರ್ಕಾರಗಳು ಪ್ರೊತ್ಸಾಹ ನೀಡಬೇಕಿದೆ. ಈಗಿನ ಸರ್ಕಾರ ಸಾಲ ಮನ್ನಾ ಕುರಿತು ಮನಸ್ಸು ಮಾಡಬೇಕಿದೆ. ರೈತರ ಬೇಡಿಕೆಯನ್ನು ಸರ್ಕಾರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.//////