ಗಡಿ ವಿವಾದ: ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ: ದೇವೇಂದ್ರ ಫಡ್ನವಿಸ್

ಮುಂಬೈ: ಮರಾಠಿ ಭಾಷಿಕರ ಮೇಲೆ ಅನ್ಯಾಯ ಆಗದಂತೆ ನಾವು ನೋಡಿಕೊಳ್ಳುತ್ತೇವೆ. ಮಹಾಮೇಳಾವ್ಗೆ ಅವಕಾಶ ಕೊಡದಿರುವ ಕರ್ನಾಟಕ ಸರ್ಕಾರದ ನಡೆ ಸರಿಯಲ್ಲ. ಗಡಿ ವಿವಾದ ವಿಚಾರದಲ್ಲಿಮಹಾರಾಷ್ಟ್ರಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿ ಭಾಗದ ಮರಾಠಿಗರ ಜೊತೆಗೆ ಮಹಾರಾಷ್ಟ್ರ ಸರ್ಕಾರವಿದೆ. ಮರಾಠಿ ಭಾಷಿಕರ ಮೇಲೆ ಅನ್ಯಾಯ ಆಗದಂತೆ ನಾವು ನೋಡಿಕೊಳ್ಳುತ್ತೇವೆ. ಮಹಾಮೇಳಾವ್ಗೆ ಅವಕಾಶ ಕೊಡದಿರುವ ಕರ್ನಾಟಕ ಸರ್ಕಾರದ ನಡೆ ಸರಿಯಲ್ಲ. ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಈಗಾಗಲೇ ಜತ್ ಸೇರಿದಂತೆ ಗಡಿ ಭಾಗದ ನೀರಾವರಿ ಯೋಜನೆಗೆ 2 ಸಾವಿರ ಕೋಟಿ ರೂ. ಘೋಷಿಸಿದ್ದಾರೆ. ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಗೃಹ ಸಚಿವ ಅಮಿತ್ ಶಾ ಮುಂದೆ ಹೇಳಿದ್ದಾರೆ. ಗಡಿ ವಿವಾದ ವಿಚಾರವಾಗಿ ಮಾಡಿದ್ದ ಟ್ವೀಟ್ ನನ್ನದಲ್ಲ ಎಂದು ಹೇಳಿದ್ದಾರೆ. ಸಿಎಂ ಹೆಸರಿನ ಟ್ವೀಟ್ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಬೊಮ್ಮಾಯಿ ಅವರನ್ನೇ ಕೇಳುತ್ತೇವೆ ಎಂದು ಫಡ್ನವಿಸ್ ಹೇಳಿದರು.//////