Belagavi News In Kannada | News Belgaum

ಸದನಕ್ಕೆ ಮಾಜಿ ಸಚಿವ ಈಶ್ವರಪ್ಪ-ರಮೇಶ್ ಜಾರಕಿಹೊಳಿ ಎಂಟ್ರಿ

ಬೆಳಗಾವಿ: ಸದನಕ್ಕೆ ಆಗಮಿಸುವ ಮುನ್ನ ಕೆ.ಎಸ್​​.ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಬೆಳಗಾವಿಯ ಖಾಸಗಿ ಹೋಟೆಲ್​ನಲ್ಲಿ ರಹಸ್ಯ ಮಾತುಕತೆ ನಡೆಸಿದರು.

ಬೆಳಗಾವಿಯ ಖಾಸಗಿ ಹೋಟೆಲ್​ನಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಈಶ್ವರಪ್ಪ ಅವರು ಸುಮಾರು ಐದು ನಿಮಿಷಗಳ ಕಾಲ ಚರ್ಚೆ ನಡೆಸಿದರು. ಎಲ್ಲ ಶಾಸಕರು, ಸಚಿವರು ಅಧಿವೇಶನಕ್ಕೆ ತೆರಳಿದ ಬಳಿಕ ಈ ಚರ್ಚೆ ನಡೆಸಿದರು. ಆದರೆ ತಮ್ಮೊಳಗೆ ನಡೆದ ಚರ್ಚೆಯ ಗುಟ್ಟಿನ ಬಗ್ಗೆ ಇಬ್ಬರು ನಾಯಕರು ಬಾಯಿಬಿಟ್ಟಿಲ್ಲ. ಈ ಬಗ್ಗೆ ಏನು ಹೇಳಲ್ಲ ನೋ ಕಮೆಂಟ್ಸ್ ಎಂದು ರಮೇಶ್ ಜಾರಕಿಹೊಳಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.

ಇನ್ನೊಂದೆಡೆ, ಬಿಜೆಪಿ ವಿಶ್ವಾಸದ ಮೇಲೆ ನಂಬಿಕೆ ಇಟ್ಟುಕೊಂಡಿರುವ ಪಾರ್ಟಿ. ಸಿಎಂ ಬೊಮ್ಮಾಯಿ ಮತ್ತು ಪಕ್ಷದ ಮೇಲೆ ನಮಗೆ ನಂಬಿಕೆ ಇದೆ. ಹಾಗಾಗಿ ಇಂದು ಸದನಕ್ಕೆ ಹಾಜರಾಗುತ್ತಿದ್ದೇವೆ ಎಂದು ಈಶ್ವರಪ್ಪ ಹೇಳಿದ್ದಾರೆ. ನಮ್ಮ ಮೇಲೆ ಬಂದಿದ್ದ ಆರೋಪದ ಕ್ಲೀನ್​ಚಿಟ್​​ ಸಿಕ್ಕಾಗಿದೆ. ಕ್ಲೀನ್​ ಚಿಟ್​ ಸಿಕ್ಕರೂ ಯಾಕೆ ಸಂಪುಟಕ್ಕೆ ಸೇರಿಸಿಕೊಂಡಿಲ್ಲ. ಈ ಬಗ್ಗೆ ರಾಜ್ಯದ ಜನರು, ಕಾರ್ಯಕರ್ತರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಸುವರ್ಣಸೌಧದಲ್ಲಿ ಹೇಳಿಕೆ ನೀಡಿದರು.
ಸದ್ಯ  ವಿಧಾನಸಭೆ ಕಲಾಪಕ್ಕೆ ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಅವರು ಹಾಜರಾಗಿದ್ದಾರೆ. 3 ದಿನಗಳಿಂದ ಇಬ್ಬರು ಶಾಸಕರು ಸದನಕ್ಕೆ ಗೈರಾಗಿದ್ದರು.///////