ಬೆಳಗಾವಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ 10ಕ್ಕೂ ಹೆಚ್ಚು ಅಂಗಡಿಗಳು

ಬೆಳಗಾವಿ: ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಹತ್ತಿಕೊಂಡ ಬೆಂಕಿ ಅಕ್ಕಪಕ್ಕದಲ್ಲಿದ್ದ ಅಂಗಡಿಗಳಿಗೂ ಆವರಿಸಿದ ಪರಿಣಾಮ 10ಕ್ಕೂ ಹೆಚ್ಚು ಅಂಗಡಿಗಳು ಹೊತ್ತಿ ಉರಿದ ಘಟನೆ ನಗರದ ಪೋರ್ಟ್ ರಸ್ತೆಯಲ್ಲಿ ನಡೆದಿದೆ.
2 ಟೈರ್ ಅಂಗಡಿಗಳು, ಬ್ಯಾಟರಿ ಅಂಗಡಿ, ಟ್ರಾನ್ಸ್ಪೋರ್ಟ್ ಶಾಪ್, ಟೂಲ್ಸ್ ಅಂಗಡಿ ಸೇರಿ 10ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಹೋಗಿವೆ. ಸ್ಥಳಕ್ಕೆ 12 ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಸ್ಥಳಕ್ಕೆ ಇಬ್ಬರು ಡಿಸಿಪಿ ಸೇರಿದಂತೆ 100ಕ್ಕೂ ಹೆಚ್ಚು ಪೊಲೀಸರಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.//////