Belagavi News In Kannada | News Belgaum

ಎಸಿಸಿಟಿಒ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು‌ ದಾಳಿ

ಬೆಳಗಾವಿ: ತಂಬಾಕು ಉತ್ಪನ್ನ ತಯಾರಿಕಾ ಘಟಕ ಹಾಗೂ ಸಹಾಯ ವಾಣಿಜ್ಯ ತೆರಿಗೆ ಅಧಿಕಾರಿ (ಎಸಿಸಿಟಿಒ) ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕಿ ಯಶೋಧಾ ವಂಟಗೋಡಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಹಾಗೂ ಪೊಲೀಸ ಇನ್ಸ್ಪೆಕ್ಟರ್, ಸಿಬ್ಬಂದಿಗಳ ಮಂಗಳವಾರ ಬೆಳ್ಳಂ ಬೆಳಿಗ್ಗೆ ನಿಪ್ಪಾಣಿ ತಾಲೂಕಿನಲ್ಲಿ ಹೀರಾಪಾನ್ ಮಸಾಲಾ ತಯಾರಿಕಾ ಘಟಕ ಹಾಗೂ ನಿಪ್ಪಾಣಿಯ ಸಹಾಯಕ ವಾಣಿಜ್ಯ ತೆರಿಗೆ ಅಧಿಕಾರಿಗಳ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ದಾಳಿ ಕಾಲಕ್ಕೆ ಹೀರಾ ಪಾನ್ ಮಸಾಲಾ ತಯಾರಿಕಾ ಘಟಕದಲ್ಲಿ ಉತ್ಪಾದನೆ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಬೆಳಗ್ಗೆ 10:30 ರ ಸುಮಾರಿಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ತಡರಾತ್ರಿವರೆಗೂ ಪರಿಶೀಲನೆ ಕಾರ್ಯಕೈಗೊಂಡಿದ್ದಾರೆ.//////