Belagavi News In Kannada | News Belgaum

ಸುವರ್ಣವಿಧಾನಸೌಧದ ಆವರಣದಲ್ಲಿ ಮಹಾತ್ಮರ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಭೂಮಿ ಪೂಜೆ

ಬೆಳಗಾವಿ: ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ, ಡಾ‌. ಬಿ‌. ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ‌.ಪಾಟೀಲ್, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.//////