Belagavi News In Kannada | News Belgaum

15ನೇ ವಿಧಾನಸಭೆ 14ನೇ ಅಧಿವೇಶನದ ಕಾರ್ಯಕಲಾಪಗಳ ಸಂಕ್ಷಿಪ್ತ ವರದಿ

15ನೇ ವಿಧಾನಸಭೆ 14ನೇ ಅಧಿವೇಶನದ ಕಾರ್ಯಕಲಾಪಗಳ ಸಂಕ್ಷಿಪ್ತ ವರದಿ

ಬೆಳಗಾವಿ : 15 ನೇ ವಿಧಾನ ಸಭೆಯ 14ನೇ ಅಧಿವೇಶನವು ದಿನಾಂಕ 19ನೇ ಡಿಸೆಂಬರ್, 2022ರಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನ ಸಭೆಯ ಸಭಾಂಗಣದಲ್ಲಿ ಪ್ರಾರಂಭವಾಗಿ 29ನೇ ಡಿಸೆಂಬರ್, 2022 ರವರೆಗೆ 9 ದಿನಗಳ ಕಾಲ ಸುಮಾರು 41 ಗಂಟೆ 20 ನಿಮಿಷಗಳ ಕಾಲ ಕಾರ್ಯಕಲಾಪ ನಡೆಸಲಾಗಿದೆ.

ಇತ್ತೀಚೆಗೆ ನಿಧನ ಹೊಂದಿದ ಗಣ್ಯರುಗಳಿಗೆ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿ, ಅಂಗೀಕರಿಸಲಾಗಿದೆ.

ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಬಗ್ಗೆ ಕಾರ್ಯದರ್ಶಿಯವರ ವರದಿಯನ್ನು ಮಂಡಿಸಲಾಗಿದೆ.

ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರು ನೀಡಿರುವ ಮಹಾನಗರ ಪಾಲಿಕೆಗಳಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ (ಹಂತ-III)ರ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನಾ ವರದಿ ಮತ್ತು 2021-22ನೇ ಸಾಲಿನ ಧನವಿನಿಯೋಗ ಲೆಕ್ಕಗಳು ಮತ್ತು ಹಣಕಾಸಿನ ಲೆಕ್ಕಗಳ (ಸಂಪುಟ 1 ಮತ್ತು II)ನ್ನು ಸದನದಲ್ಲಿ ಮಂಡಿಸಲಾಗಿದೆ.

2021-22ನೇ ಸಾಲಿನ ವಿಧಾನಮಂಡಲದ ವಿವಿಧ ಜಂಟಿ ಸಮಿತಿಗಳು ಮತ್ತು

ವಿವಿಧ ಸಮಿತಿಗಳನ್ನು ಪುನ‌ರಚನೆ ಮಾಡಲು ಸದನವು ಮಾನ್ಯ

ವಿಧಾನಸಭೆಯ ಸಭಾಧ್ಯಕ್ಷರವರಿಗೆ ದಿನಾಂಕ: 27.12.2022 ರಂದು ಅಧಿಕಾರ ನೀಡಲಾಗಿರುತ್ತದೆ. ಒಂದು ಹಕ್ಕುಚ್ಯುತಿ ಪ್ರಸ್ತಾವವನ್ನು ಸದನದಲ್ಲಿ ಮಂಡಿಸಿದ್ದು, ಈ ಬಗ್ಗೆ ಚರ್ಚಿಸಿ ತಿರಸ್ಕರಿಸಲಾಗಿದೆ.

ಸದನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 2022-23ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತು 2022-23ನೇ ಸಾಲಿನ ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿಯನ್ನು ದಿನಾಂಕ:26.12.2022 ರಂದು ಮಂಡಿಸಿದ್ದು, ದಿನಾಂಕ:29.12.2022 ರಂದು ಮತಕ್ಕೆ ಹಾಕಿ ಅಂಗೀಕರಿಸಲಾಗಿದೆ. 2021 ಸಾಲಿನ ವಿಧೇಯಕವನ್ನು ಹಿಂಪಡೆಯಲಾಗಿದೆ.

ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ)

ಈ ಅಧಿವೇಶನದಲ್ಲಿ 12 ವಿಧೇಯಕಗಳನ್ನು ಮಂಡಿಸಲಾಗಿದ್ದು, ಕಳೆದ ಅಧಿವೇಶನದಲ್ಲಿ ಬಾಕಿ ಇದ್ದ 01 ವಿಧೇಯಕ, ವಿಧಾನ ಪರಿಷತ್ತಿನಿಂದ ಅಂಗೀಕಾರವಾದ ರೂಪದಲ್ಲಿರುವ 02 ವಿಧೇಯಕಗಳು ಹಾಗೂ ಧನವಿನಿಯೋಗ ವಿಧೇಯಕವೂ ಸೇರಿದಂತೆ ಒಟ್ಟು 09 ವಿಧೇಯಕಗಳನ್ನು ಅಂಗೀಕರಿಸಲಾಗಿದೆ.

ನಿಯಮ 60 ರಡಿಯಲ್ಲಿ ನೀಡಿದ್ದ ನಿಲುವಳಿ ಸೂಚನೆಗಳನ್ನು ನಿಯಮ 69ಕ್ಕೆ ಪರಿವರ್ತಿಸಿರುವುದನ್ನು ಸೇರಿಸಿ ಒಟ್ಟು 17 ಸೂಚನೆಗಳನ್ನು ನಿಯಮ 69 ರಡಿಯಲ್ಲಿ ಸ್ವೀಕರಿಸಿದ್ದು, 05 ಸೂಚನೆಗಳನ್ನು ನಿಯಮ 69ರಡಿಯಲ್ಲಿ ಚರ್ಚಿಸಲಾಗಿರುತ್ತದೆ.

ಮಹಾರಾಷ್ಟ್ರದ ಜನತೆಯು ಅನಾವಶ್ಯಕವಾಗಿ ಸೃಷ್ಟಿಸಿರುವ ಗಡಿ ವಿವಾದವನ್ನು ಖಂಡಿಸಿ ರಾಜ್ಯದ ಹಿತರಕ್ಷಣೆಗೆ ಕಟಿಬದ್ಧರಾಗಿರುವುದಾಗಿ ಸದನವು ಸರ್ವಾನುಮತದಿಂದ ಅಂಗೀಕರಿಸಿದೆ. ನಿರ್ಣಯವನ್ನು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಸದನದಲ್ಲಿ ವಿಶೇಷ ಚರ್ಚೆ ನಡೆಸಲಾಗಿದೆ.

ಕರ್ನಾಟಕ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯು ಸೇರಿದಂತೆ

ವಿವಿಧ ಸಮಿತಿಗಳು 08 ವರದಿಗಳನ್ನು ಸದನದಲ್ಲಿ ಮಂಡಿಸಲಾಗಿರುತ್ತದೆ. ಸಭೆಯ ಮುಂದಿಡಲಾದ ಕಾಗದ ಪತ್ರಗಳ 1, 2 ಮತ್ತು 3ನೇ ಪಟ್ಟಿಯಿಂದ 24 ಅಧಿಸೂಚನೆಗಳು, 01 ಅಧ್ಯಾದೇಶ, 106 ವಾರ್ಷಿಕ ವರದಿಗಳು ಹಾಗೂ 122 ಲೆಕ್ಕಪರಿಶೋಧನಾ ವರದಿಗಳನ್ನು ಸದನದಲ್ಲಿ ಮಂಡಿಸಲಾಗಿರುತ್ತದೆ.

ಒಟ್ಟು 2125 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾಗಿದ್ದ 150 ಪ್ರಶ್ನೆಗಳ ಪೈಕಿ 146 ಪ್ರಶ್ನೆಗಳಿಗೆ ಹಾಗೂ ಲಿಖಿತ ಮೂಲಕ ಉತ್ತರಿಸುವ 1923 ಪ್ರಶ್ನೆಗಳ ಪೈಕಿ 1614 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ.

ನಿಯಮ 351 ರಡಿಯಲ್ಲಿ 160 ಸೂಚನೆಗಳನ್ನು ಅಂಗೀಕರಿಸಿದ್ದು, 11 ಸೂಚನೆಗಳ ಉತ್ತರಗಳನ್ನು ಸ್ವೀಕರಿಸಲಾಗಿದೆ. ಗಮನ ಸೆಳೆಯುವ 289 ಚರ್ಚಿಸಲಾಗಿದೆ ಮಂಡಿಸಲಾಗಿದೆ. ಒಟ್ಟಾರೆಯಾಗಿ ಸೂಚನೆಗಳ 190 85 ಸೂಚನೆಗಳನ್ನು ಸೂಚನೆಗಳಿಗೆ ಉತ್ತರವನ್ನು ಸ್ವೀಕರಿಸಲಾಗಿದೆ.

ಶೂನ್ಯ ವೇಳೆಯಲ್ಲಿ ಒಟ್ಟು 40 ಸೂಚನೆಗಳನ್ನು ಚರ್ಚಿಸಲಾಗಿದೆ. ಸುವರ್ಣ ವಿಧಾನಸೌಧದ ವಿಧಾನಸಭೆಯ

ಸಭಾಂಗಣದಲ್ಲಿ ವಿಶ್ವಗುರು ಬಸವಣ್ಣ, ಮಹಾತ್ಮಾ ಗಾಂಧೀಜಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಸರ್ದಾರ್ ವಲ್ಲಭಾಯಿ ಪಟೇಲ್‌, ಸ್ವಾಮಿ ವಿವೇಕಾನಂದ, ನೇತಾಜಿ ಸುಭಾಷ ಚಂದ್ರ ಬೋಸ್ ಮತ್ತು ವೀರ್ ಸಾವರ್ಕರ್ ಇವರುಗಳ ಭಾವಚಿತ್ರಗಳನ್ನು ODOB:19.12.2022 ಅನಾವರಣಗೊಳಿಸಲಾಗಿದೆ ಹಾಗೂ ದಿನಾಂಕ:29.12.2022 ರಂದು ಸುವರ್ಣ ವಿಧಾನಸೌಧದ ಆವರಣದಲ್ಲಿ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮಾ ಗಾಂಧೀಜಿ ಇವರುಗಳ ಪ್ರತಿಮೆ ನಿರ್ಮಾಣ ಕಾಮಗಾರಿಯ ಭೂಮಿಪೂಜೆ ಮಾಡಿರುವುದು ವಿಶೇಷವಾಗಿದೆ.

ಸದನ ನಡೆಸಲು ಸಹಕರಿಸಿದ ಸಭಾ ನಾಯಕರಾದ ಮಾನ್ಯ ಮುಖ್ಯಮಂತ್ರಿಯವರಿಗೆ ಮಾನ್ಯ ವಿರೋಧ ಪಕ್ಷದ ನಾಯಕರಿಗೆ, ಸಚಿವ ಸಂಪುಟದ ಸದಸ್ಯರಿಗೆ, ಸರ್ಕಾರಿ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕರಿಗೆ, ಎಲ್ಲಾ ಸದಸ್ಯರುಗಳಿಗೆ ಮಾಧ್ಯಮ ಪ್ರತಿನಿಧಿಗಳಿಗೆ, ಇಲಾಖಾ ಮುಖ್ಯಸ್ಥರು, ಅಧಿಕಾರಿ-ಸಿಬ್ಬಂದಿಯವರಿಗೆ, ಬೆಳಗಾವಿಯಲ್ಲಿ ವಸತಿ ಮತ್ತು ಸಾರಿಗೆ ವ್ಯವಸ್ಥೆ ಮಾಡಿಕೊಟ್ಟು ಶಾಸಕರ ಸೌಕರ್ಯಕ್ಕೆ ನಿರಂತರವಾಗಿ ಪ್ರಯತ್ನಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಎಲ್ಲರಿಗೂ ಹಾಗೂ ವಿಶೇಷವಾಗಿ ಬೆಳಗಾವಿ ಜಿಲ್ಲಾಡಳಿತದವರಿಗೆ ಹಾಗೂ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಗಳನ್ನು ಸೂಕ್ತವಾಗಿ ನಿರ್ವಹಿಸಿದ ಪೊಲೀಸ್‌ ವರಿಷ್ಠಾಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹಾಗೂ ವಿಧಾನಸಭೆ ಸಚಿವಾಲಯದ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕೊರೋನಾ ಕುರಿತು ಮುಂಜಾಗ್ರತೆ ವಹಿಸುವಂತೆ ಕೋರುತ್ತಾ ನಾಡಿನ ಜನತೆಗೆ 2023ರ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದರು

ಈಗ ರಾಷ್ಟ್ರಗೀತೆಯೊಂದಿಗೆ ಸದನವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿಸಲಾಗಿತ್ತು