Belagavi News In Kannada | News Belgaum

ಹೆಡ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹೃದಯಾಘಾತ

ಬೆಂಗಳೂರು: ಬೆಂಗಳೂರು ನಗರದಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಹೆಬ್ಬಾಳ ಠಾಣೆಯ ಹೆಡ್ ಕಾನ್ಸ್‌ಟೇಬಲ್ ವಿರೂಪಾಕ್ಷಪ್ಪ ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ಪಾಳಿಯಲ್ಲಿ ಅವರು ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಬುಧವಾರ ಬೆಳಗ್ಗೆ 7 ಗಂಟೆಗೆ ಹೊಯ್ಸಳ ವಾಹನದಲ್ಲಿ ಗಸ್ತು ತಿರುಗುವಾಗ ತಲೆಸುತ್ತಿ ಬಿದ್ದಿದ್ದರು. ಆಗ ಪೊಲೀಸ್ ವಾಹನದಲ್ಲಿಯೇ ಕರೆದುಕೊಂಡು ಹೋಗಿ ಹೆಬ್ಬಾಳ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾದೇ ವಿರೂಪಾಕ್ಷಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.