Belagavi News In Kannada | News Belgaum

ಪೊಲೀಸ್ ಇನ್ಸ್‌ಪೆಕ್ಟರ್ ಹುದ್ದೆಗೆ ರಾಜೀನಾಮೆ ರಾಜಕೀಯ ಪ್ರವೇಶ

ಚಾಮರಾಜನಗರ: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯಾಱರೋ ಏನೋನೋ ಸರ್ಕಸ್ ಮಾಡ್ತಿದ್ದಾರೆ. ಕೊಳ್ಳೇಗಾಲದ ಪೊಲೀಸ್ ಇನ್ಸ್‌ಪೆಕ್ಟರ್ ಪುಟ್ಟಸ್ವಾಮಿ, ರಾಜಕೀಯ ಪ್ರವೇಶಕ್ಕಾಗಿ ಇನ್ಸ್‌ಪೆಕ್ಟರ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಪುಟ್ಟಸ್ವಾಮಿ ಅವರು ಚಾಮರಾಜನಗರ, ಕೊಳ್ಳೇಗಾಲ, ಹುಣಸೂರು ಪೊಲೀಸ್ ಠಾಣೆಗಳಲ್ಲಿ 27 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಕೊಳ್ಳೇಗಾಲ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಕೊಳ್ಳೇಗಾಲದಲ್ಲಿ ಬಿ.ಪುಟ್ಟಸ್ವಾಮಿ ಅಭಿಮಾನಿ ಬಳಗ, ಬಿ.ಪುಟ್ಟಸ್ವಾಮಿ ಸೇವಾ ಟ್ರಸ್ಟ್ ಮೂಲಕ ಕ್ಷೇತ್ರದ ಹಲವು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಬಿಜೆಪಿ ಟಿಕೆಟ್‌ಗೆ ಪೈಪೋಟಿ: ಪುಟ್ಟಸ್ವಾಮಿ ಅವರು ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ಹಾಲಿ ಶಾಸಕ ಎನ್.ಮಹೇಶ್, ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಸಂಸದ ಶ್ರೀನಿವಾಸ್ ಪ್ರಸಾದ್ ಅಳಿಯ ಡಾ. ಮೋಹನ್ ನಡುವೆ ಬಿಜೆಪಿ ಟಿಕೆಟ್‌ಗಾಗಿ ಪೈಪೋಟಿ ನಡೀತಿದೆ. ಇಷ್ಟಾದ್ರೂ ಪುಟ್ಟಸ್ವಾಮಿ ಅವರು ತಮ್ಮ ವೃತ್ತಿ ಜೀವನ ಬಿಟ್ಟು ರಾಜಕೀಯ ಪ್ರವೇಶಿಸಲು ತುದಿಗಾಲಲ್ಲಿ ನಿಂತಿದ್ದಾರೆ.