ಸ್ಯಾಂಟ್ರೋ ರವಿ ಜೈಲಿಗೆ ಬರುತ್ತಿದ್ದಂತೆ ಮೈಸೂರು ಕಾರಾಗೃಹ ಅಧೀಕ್ಷಕ ಕರ್ತವ್ಯಕ್ಕೆ ಗೈರು

ಮೈಸೂರು: ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಮಂಜುನಾಥ್ ಆಲಿಯಾಸ್ ಸ್ಯಾಂಟ್ರೋ ರವಿಯನ್ನು ಶನಿವಾರ ರಾತ್ರಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಸ್ಯಾಂಟ್ರೋ ರವಿ ಜೈಲಿಗೆ ಬರುತ್ತಿದ್ದಂತೆ ಮೈಸೂರು ಕಾರಾಗೃಹ ಅಧೀಕ್ಷಕ ಕರ್ತವ್ಯಕ್ಕೆ ಗೈರಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಶನಿವಾರ ಮಧ್ಯಾಹ್ನದವರೆಗೂ ಕರ್ತವ್ಯದಲ್ಲಿದ್ದ ಮಹೇಶ್ ಕುಮಾರ್ ನಂತರ ಕೆಲಸದಿಂದ ಹೊರ ಬಂದಿದ್ದಾರೆ. ಮಹೇಶ್ ಕುಮಾರ್ ಅವರನ್ನು ಮೈಸೂರಿನ ಕಾರಾಗೃಹ ಅಧೀಕ್ಷಕ ಹುದ್ದೆಯಿಂದ ಬಿಡುಗಡೆ ಮಾಡಿ ವಾಪಸ್ ಬೆಂಗಳೂರಿಗೆ ಕರೆಸಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
‘ಸ್ಯಾಂಟ್ರೋ ರವಿ’ಗೆ ಮೈಸೂರು ಕೇಂದ್ರ ಕಾರಾಗೃಹ ಸಿಬ್ಬಂದಿ ವಿಚಾರಣಾಧೀನ ಕೈದಿ ನಂಬರ್ ನೀಡಿದ್ದಾರೆ. ಸ್ಯಾಂಟ್ರೋ ರವಿಗೆ ಈಗ 18894 ನಂಬರ್ ನೀಡಲಾಗಿದೆ. ನಿನ್ನೆ ಇಡೀ ದಿನ ಸ್ಯಾಂಟ್ರೋ ರವಿ ಜೈಲಿನಲ್ಲಿ ಕಾಲ ಕಳೆದಿದ್ದಾನೆ. ಇಂದು ಪೊಲೀಸರು ಕೋರ್ಟ್ ಗೆ ಅರ್ಜಿ ಸಲ್ಲಿಸಿ ಸ್ಯಾಂಟ್ರೋ ರವಿಯನ್ನು ತಮ್ಮ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ. ಇಂದು ಸ್ಯಾಂಟ್ರೋ ರವಿಯನ್ನು ಪೊಲೀಸ್ ವಶಕ್ಕೆ ಪಡೆಯಲು ಇಂದು ಪೊಲೀಸರು ಅರ್ಜಿ ಸಲ್ಲಿಸಲಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಸ್ಯಾಂಟ್ರೋ ರವಿಯನ್ನು ತಮ್ಮ ವಶಕ್ಕೆ ನೀಡಲು ಮೈಸೂರಿನ 6 ನೇ ಜಿಲ್ಲಾ ಅಪರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ಹೆಚ್ಚಿನ ವಿಚಾರಣೆ ಅಗತ್ಯ ಇದ್ದರೆ ಅರ್ಜಿ ಸಲ್ಲಿಸುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿತ್ತು.
ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಸ್ಯಾಂಟ್ರೋ ರವಿಯನ್ನು ಪೊಲೀಸರು ಬಂಧಿಸಿ ಶನಿವಾರ ಮುಂಜಾನೆಗೆ ಮೈಸೂರಿಗೆ ಕರೆತಂದಿದ್ದರು, ನಂತರ ಪೊಲೀಸರು ಪೊಲೀಸ್ ಬಿಗಿ ಭದ್ರತೆಯಲ್ಲಿ ಸ್ಯಾಂಟ್ರೋ ರವಿ’ ಯನ್ನು ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆದುಕೊಂಡು ಹೋಗಿದ್ದು, ಜಡ್ಜ್ ಮುಂದೆ ಹಾಜರುಪಡಿಸಿದ್ದರುಮೈಸೂರಿನ ಜೆಎಂಎಫ್ ಸಿ ಕೋರ್ಟ್ ಜಡ್ಜ್ ನಿವಾಸದಲ್ಲಿ ಜಡ್ಜ್ ಎದುರು ಸ್ಯಾಂಟ್ರೋ ರವಿಯನ್ನು ಹಾಜರುಪಡಿಸಲಾಗಿದ್ದು, ಸ್ಯಾಂಟ್ರೋ ರವಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಗುಜರಾತ್ ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು 11 ದಿನಗಳ ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ನಿನ್ನೆ ರಾಮನಗರದಲ್ಲಿ ಸ್ಯಾಂಟ್ರೋ ರವಿ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದರು. ರಾಮನಗರದಲ್ಲಿ ಎಸ್ ಪಿ ಸಂತೋಷ್ ಬಾಬು ನೇತೃತ್ವದ ತಂಡದಿಂದ ಸ್ಯಾಂಟ್ರೋ ರವಿ ಕಾರು ಚಾಲಕ ಗಿರೀಶ್ ನನ್ನು ವಶಕ್ಕೆ ಪಡೆಯಲಾಗಿತ್ತು. . ರಾಮನಗರದಲ್ಲಿ ಸ್ಯಾಂಟ್ರೋ ರವಿ 2 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಎನ್ನುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಮೈಸೂರಿನಿಂದ ಬಂದಿದ್ದ ಪೊಲೀಸರು ರಾಮನಗರ ಪೊಲೀಸರ ಸಹಾಯದಿಂದ ರವಿ ಕಾರು ಚಾಲಕ ಗಿರೀಶ್ ನನ್ನು ವಶಕ್ಕೆ ಪಡೆದಿದ್ದರು. ಗುಜರಾತ್ ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು 11 ದಿನಗಳ ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ .//////