Belagavi News In Kannada | News Belgaum

ವಿವೇಕಾನಂದ ಜಯಂತಿ ಉತ್ಸವ ಕಾರ್ಯಕ್ರಮ ಚಚಡಿ ಗ್ರಾಮದಲ್ಲಿ ನೆರವೇರಿತು.

ಬೈಲಹೊಂಗಲ- ವೀರ  ಸ್ವಾಮಿ ವಿವೇಕಾನಂದ ಜಯಂತಿ ಉತ್ಸವ ಕಾರ್ಯಕ್ರಮ ಚಚಡಿ ಗ್ರಾಮದಲ್ಲಿ ನೆರವೇರಿತು. ಚಚಡಿ ಗ್ರಾಮದಲ್ಲಿ ಮಾಜಿ ಶಾಸಕ ಜಗದೀಶ ಮೆಟಗುಡ್ಡ ಅಭಿಮಾನಿ ಬಳಗ ಹಾಗೂ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಬೈಕ್ ರ್ಯಾಲಿ ಮುಖಾಂತರ ಸ್ವಾಮಿ ವಿವೇಕಾನಂದರ ಭಾವಚಿತ್ರದ ಮೆರವಣ ಗೆ ಪ್ರಮುಖ ಬೀದಿಗಳ ಮುಖಾಂತರ ಸಂಗಮೇಶ್ವರ ದೇವಸ್ಥಾನದವರೆಗೆ ನಡೆಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಸ್ವಾಮಿ ವಿವೇಕಾನಂದರ ವೇಷಧಾರಿಗಳಾಗಿ ಬಂದು ಭಾಗವಹಿಸಿದ್ದರು, ಸ್ವಾಮಿ ವಿವೇಕಾನಂದರ ಬಗ್ಗೆ ಭಾಷಣಗಳನ್ನು ಮಾಡಿದರು.
ಚಚಡಿ ಗ್ರಾಮದ ಸಂಗಮೇಶ್ವರ ದೇವಸ್ಥಾನದ ಆವರಣದ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದ ಹಾಗೂ ಭಾರತಮಾತೆಯ ಮತ್ತು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಭಾವಚಿತ್ರಕ್ಕೆ ಪೂಜಿಸುವ ಮುಖಾಂತರ ಮುಖ್ಯ ಭಾಷಣಕಾರರಾಗಿ ಕರ್ನಾಟಕ ಉತ್ತರ ಪ್ರಾಂತ ಧರ್ಮ ಜಾಗರಣ ಸಂಯೋಜಕ ದಿಲೀಪ್ ವೆರ್ಣೇಕರ್ ಅವರು ಸ್ವಾಮಿ ವಿವೇಕಾನಂದರ ಬಗ್ಗೆ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಜಗದೀಶ ಮೆಟಗುಡ್ಡ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು.