ಬಿಜೆಪಿಯ ಹಿರಿಯ ಮುಖಂಡ ಕರುಣಾಕರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ

ಯಮಕನಮರಡಿ: ಚಿಲಭಾಂವಿ ಗ್ರಾಮದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಕರುಣಾಕರ ಶೆಟ್ಟಿ ಮತ್ತು ಕಾರ್ಯಕರ್ತರು ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತನಾಡಿ, ಶಾಲೆಗಳ ಅಭಿವೃದ್ಧಿ ಸೇರಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಮಾಡಿದ್ದೇನೆ. ಕಳೆದ 15 ವರ್ಷಗಳ ಹಿಂದೆ ಇದ್ದ ಯಮಕನಮರಡಿ ಕ್ಷೇತ್ರ ಈಗ ಹೇಗೆ ಅಭಿವೃದ್ಧಿ ಹೊಂದಿದೆ ಎಂಬುವುದರ ಬಗ್ಗೆ ಕ್ಷೇತ್ರದ ಜನರು ಯೋಚಿಸಬೇಕು ಹೊರತು ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ತಿಳಿ ಹೇಳಿದರು.
ಕಾರ್ಯಕರ್ತರು ಮನೆಮನೆಗೆ ತೆರಳಿ ನಾವು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಪಕ್ಷದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಎಲ್ಲರೂ ಒಗ್ಗಟ್ಟಿನ ಮೂಲಕ ಕೆಲಸ ಮಾಡಬೇಕು ಎಂದು ಕಾಂಗ್ರೆಸ್ ಸೇರಿದ ನೂತನ ಕಾರ್ಯಕರ್ತರಿಗೆ ತಿಳಿ ಹೇಳಿದರು.
ಈ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಕರುಣಾಕರ ಶೆಟ್ಟಿ ಮಾತನಾಡಿ, ಕೆಪಿಸಿಸಿ ಕಾಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡುವ ಮುಖಾಂತರ ಇಡಿ ರಾಜ್ಯವೇ ಯಮಕನಮರಡಿ ಕ್ಷೇತ್ರದತ್ತ ನೋಡುವ ಹಾಗೇ ಮಾಡಿದ್ದಾರೆ. ಇಂಥ ನಾಯಕರ ಜತೆಗೂಡಿ ಕಾಂಗ್ರೆಸ್ ಪಕ್ಷವನ್ನು ಬಲ ಪಡಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದರು.
ಈ ವೇಳೆ ಯುವ ನಾಯಕ ರಾಹುಲ್ ಜಾರಕಿಹೊಳಿ ಸೇರಿದಂತೆ ಚಿಲಭಾಂವಿ ಗ್ರಾಮದ ಮುಖಂಡರು ಹಾಗೂ ಅನೇಕ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.