ಶಿವಸೇನೆ ಸಂಸದ ಧೈರ್ಯಶೀಲ್ ಮಾನೆಗೆ ಬೆಳಗಾವಿ ಗಡಿ ಪ್ರವೇಶ ನಿರ್ಬಂಧ
ಎಂಇಎಸ್ ಗೆ ಬಿಸಿ ಮುಟ್ಟಿಸಿದ ಬೆಳಗಾವಿ ಜಿಲ್ಲಾಧಿಕಾರಿ

ಬೆಳಗಾವಿ: ಇಂದು ಎಂಇಎಸ್ ಆಯೋಜಿಸಿದ್ದ ಹುತಾತ್ಮ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಲಿದ್ದ ಶಿವಸೇನೆ ಸಂಸದ ಧೈರ್ಯಶೀಲ್ ಮಾನೆಗೆ ಬೆಳಗಾವಿ ಗಡಿ ಪ್ರವೇಶ ನಿರ್ಬಂಧ ಹೇರಿ ನಿನ್ನೆ ರಾತ್ರಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.
ಮಹಾರಾಷ್ಟ್ರದ ಗಡಿ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಧೈರ್ಯಶೀಲ್ ಮಾನೆ, ಬೆಳಗಾವಿಗೆ ಆಗಮಿಸಿ,ಪ್ರಚೋದನಾತ್ಮಕ ಭಾಷಣ ಮಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಹಿನ್ನಲೆಯಲ್ಲಿ ಡಿಸಿ ನಿತೇಶ ಪಾಟೀಲ ಸಂಸದ ಮಾನೆಗೆ ಸಿಆರ್ಪಿಸಿ 1997, ಕಲಂ 144 (3) ಅನ್ವಯ ವಿಶೇಷ ಅಧಿಕಾರ ಬಳಸಿ ನಿರ್ಬಂಧ ಹೇರಿ ಎಂಇಎಸ್ ಗೆ ಬಿಸಿ ಮುಟ್ಟಿಸುವ ಕೆಲಸ ಮಾಡಿದ್ದಾರೆ.
ಡಿವಿವಾದ ಹೋರಾಟದಲ್ಲಿ ಗಲಭೆ ಸೃಷ್ಟಿಸಿ ಗೋಲಿಬಾರ್ಗೆ ಮೃತರಾದವರ ಸ್ಮರಣಾರ್ಥ ಕಾರ್ಯಕ್ರಮ ಪ್ರತಿ ವರ್ಷ ನಡೆಯುತ್ತದೆ. ಹೀಗಾಗಿ ಬೆಳಗಾವಿಯ ಹುತಾತ್ಮ ಚೌಕ್ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಶಿವಸೇನೆ ಠಾಕ್ರೆ ಬಣ ಸಾಥ್ ನೀಡಿದ್ದು, . ಎಂಇಎಸ್ನಿಂದ ಪ್ರಚೋದನಾತ್ಮಕ ಭಾಷಣ ಮಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಹಿನ್ನಲೆಯಲ್ಲಿ ಡಿಸಿ ಎಂಇಎಸ್ ಗೆ ಬಿಸಿ ಮುಟ್ಟಿಸಿದ್ದಾರೆ.