Belagavi News In Kannada | News Belgaum

ಯಾವುದೇ ನೋಟಿಸ್ ಬಂದಿಲ್ಲ, ವದಂತಿ ಹಬ್ಬಿಸಿದ್ದಾರೆ : ಶಾಸಕ ಯತ್ನಾಳ್

ವಿಜಯಪುರ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ನನಗೆ ಯಾವುದೇ ನೋಟಿಸ್  ಬಂದಿಲ್ಲ. ಸುಮ್ಮನೆ ವದಂತಿ ಹಬ್ಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ನಗರದಲ್ಲಿ ಮಾತನಾಡಿದ ಅವರು, ನನಗೆ ನೋಟಿಸ್ ಕೊಡುವಂತಹ ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲ. ಭ್ರಷ್ಟರು ರಾಜಕೀಯ ಮುಂದುವರೆಸುವವರ ಬಗ್ಗೆ ನಾನು ಮಾತನಾಡಿದ್ದೇನೆ. ಇನ್ನು ಯಾಕೆ ನೋಟಿಸ್ ನೀಡಿಲ್ಲ ಎಂದು ಕೆಲವರಿಗೆ ಕಾಡುತ್ತಿದೆ. ಅದಕ್ಕೆ ಇಂತಹ ಊಹಾಪೋಹ ಹರಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.