ಮೂರು ರಾಜ್ಯಗಳ ಚುನಾವಣಾ ಆಯೋಗ.ದಿನಾಂಕ ಪ್ರಕಟಣೆ ಮಾಡಿದೆ

ನವದೆಹಲಿ: ಈಶಾನ್ಯ ರಾಜ್ಯಗಳಾದ ತ್ರಿಪುರ, ನಾಗಲ್ಯಾಂಡ್, ಮೇಘಾಲಯ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.
ಫೆ. 16 ರಂದು ತ್ರಿಪುರ ಹಾಗೂ ಫೆ. 27 ರಂದು ನಾಗಲ್ಯಾಂಡ್ ಮತ್ತು ಮೇಘಾಲಯ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಮಾ. 2ರಂದು ಮೂರು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ ಐದು ವರ್ಷಗಳ ಅವಧಿಯು ಕ್ರಮವಾಗಿ ಮಾರ್ಚ್ 12, ಮಾರ್ಚ್ 15 ಮತ್ತು ಮಾರ್ಚ್ 22 ರಂದು ಕೊನೆಗೊಳ್ಳಲಿದೆ. ಆ ಅವಧಿಗೆ ಮೊದಲು, ಹೊಸ ವಿಧಾನಸಭೆ ಅಸ್ತಿತ್ವಕ್ಕೆ ಬರಬೇಕಿದೆ.