ಅತ್ಯಾಚಾರ ಪ್ರಕರಣ; ಬಿಜೆಪಿ ಶಾಸಕನ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ಲಕ್ನೋ: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ್ದ ಎಂಟು ವರ್ಷಗಳ ಹಿಂದಿನ ಅತ್ಯಾಚಾರ ಪ್ರಕರಣದಲ್ಲಿ ದುಡ್ಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕನ ವಿರುದ್ಧ ಇಲ್ಲಿನ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ.
ಹಲವು ಬಾರಿ ಸಮನ್ಸ್ ನೀಡಿದರೂ ಶಾಸಕ ರಾಮದುಲರ್ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಹೆಚ್ಚುವರಿ ಸೆಷನ್ ನ್ಯಾಯಾಧೀಶ ರಾಹುಲ್ ಮಿಶ್ರಾ ಗುರುವಾರ ಬಂಧನ ವಾರಂಟ್ ಹೊರಡಿಸಿದ್ದಾರೆ. ಜನವರಿ 23 ರಂದು ಶಾಸಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕೋರ್ಟ್ ನಿರ್ದೇಶನ ನೀಡಿದೆ.
ಸಹಾಯಕ ಜಿಲ್ಲಾ ಸರ್ಕಾರಿ ವಕೀಲ ಸತ್ಯ ಪ್ರಕಾಶ್ ತ್ರಿಪಾಠಿ ಶುಕ್ರವಾರ ಮಾತನಾಡಿ, 2014 ರ ನವೆಂಬರ್ 4 ರಂದು ಮಯೋರ್‌ಪುರ ಪ್ರದೇಶದ ವ್ಯಕ್ತಿಯೊಬ್ಬರು ಅಂದಿನ ಗ್ರಾಮದ ಮುಖ್ಯಸ್ಥನ ಪತಿ ರಾಮದುಲರ್ ತನ್ನ ಸಹೋದರಿಯನ್ನು ಬೆದರಿಸಿ ಹಲವಾರು ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದರು.
ಕೂಲಂಕಷವಾಗಿ ತನಿಖೆ ನಡೆಸಿದ ಬಳಿಕ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.///////