ಅಂಗನವಾಡಿ ಕಾರ್ಯಕರ್ತೆ ಸಾವು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗರಂ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ನೀಲಮ್ಮ ನಿನ್ನೆ ಸಾವನ್ನಪ್ಪಿದ್ದಾಳೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ನೀಲಮ್ಮಗೆ ಚಳಿ ಮತ್ತು ಜ್ವರ ಕಾಣಿಸಿಕೊಂಡು ಸಾವನ್ನಪ್ಪಿದ್ದಾರೆ.
ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಜಿಲ್ಲೆಯ ನೀಲಮ್ಮ ಅವರ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರದ ಹೊಣೆಗೇಡಿತನ ಕಾರಣ. ಮೃತರ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಜಿಲ್ಲೆಯ ನೀಲಮ್ಮ ಅವರ ಸಾವಿಗೆ ರಾಜ್ಯ ಸರ್ಕಾರದ ಹೊಣೆಗೇಡಿತನ ಕಾರಣ. ಮೃತರ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.//////