Belagavi News In Kannada | News Belgaum

ರಸ್ತೆ ಬಂದ್​ ಮಾಡಿ ಅಂಗನವಾಡಿ ಕಾರ್ಯಕರ್ತೆಯರ ತೀವ್ರ ಪ್ರತಿಭಟನೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶದ ಕಟ್ಟೆ ಒಡೆದಿದ್ದು ಅವರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಈಗ ಅವರು ನಡು ರಸ್ತೆಯಲ್ಲೇ ಕೂತು ಪ್ರತಿಭಟನೆ ನಡೆಸುತ್ತಿದ್ದು ಮೌರ್ಯ ವೃತ್ತದಿಂದ ಕಾರ್ಪೊರೇಷನ್ ಸರ್ಕಲ್ ಹಾಗೂ ಕೆ. ಆರ್ ಮಾರುಕಟ್ಟೆಗೆ ಹೋಗೋ ಒಂದು ಕಡೆ ರಸ್ತೆ ಬಂದ್ ಮಾಡಿದ್ದಾರೆ.
ಬೆಂಗಳೂರಿಗೆ 8 ಸಾವಿರಕ್ಕೂ ಹೆಚ್ಚು ಕಾರ್ಯಕರ್ತೆಯರ ಆಗಮನವಾಗಿದ್ದು ಇಡೀ ಫ್ರಿಡಂ ಪಾರ್ಕ್ ತುಂಬೆಲ್ಲಾ ಕಾರ್ಯಕರ್ತೆಯರು ಆಕ್ರೋಶ ಹೊರಹಾಕುತ್ತಿದ್ದಾರೆ. ಇಂದು ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿರುವ ಕಾರ್ಯಕರ್ತೆಯರು ಪ್ರತಿಭಟನೆಗೆ ಇಳಿದಿದ್ದಾರೆ. ಅIಖಿU ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಫ್ರಿಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತೆಯರ ಬೇಡಿಕೆಗಳು ಹಲವಾರು. ಗುಜರಾತ್ ಸರ್ಕಾರ ಈಗ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುವಿಟಿ ಯೋಜನೆ ಜಾರಿ ಮಾಡಿದ್ದು ಅದೇ ರೀತಿ ಕರ್ನಾಟಕದಲ್ಲೂ ಕಾರ್ಯಕರ್ತೆಯರಿಗೆ ಗ್ರಾಚ್ಯುವಿಟಿ ನೀಡಬೇಕು ಎನ್ನುವುದು ಇವರ ಮೊದಲ ಬೇಡಿಕೆ.
20 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಮಾತ್ರ LGK , UKG ಆರಂಭ ಅಂತ ಹೇಳಿದ್ದು 65,950 ಕೇಂದ್ರಗಳು ರಾಜ್ಯದಲ್ಲಿವೆ ಎಲ್ಲಾ ಕೇಂದ್ರದಲ್ಲೂ ಕೂಡ  ECC ಶಾಲಾ ಪೂರ್ವ ಶಿಕ್ಷಣ ಜಾರಿ ಆಗಬೇಕು ಎಂದು ಕಾರ್ಯಕರ್ತೆಯರು ಹೇಳುತ್ತಿದ್ದಾರೆ.
42 ಇಲಾಖೆಗಳ ಮಾಹಿತಿ ದಾಖಲು ಮಾಡುವ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ನೀಡಿ 4 ವರ್ಷ ಆಗಿದ್ದು ಈಗ ಹೊಸ ಮೊಬೈಲ್ ನೀಡಬೇಕು ಎಂದು ಬೇಡಿಕೆ ಇರಿಸಿದ್ದಾರೆ
ಈಗಾಲೇ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಗಳಲ್ಲಿ ತಮ್ಮ ಮನವಿ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ತಿಳಿಸಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ ಸರ್ಕಾರ ಕೂಡಲೇ ಮಧ್ಯ ಪ್ರವೇಶ ಮಾಡಿ ಬೇಡಿಕೆ ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ ಎಂದು ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸುನಂದಾ ಮಾಹಿತಿ ನೀಡಿದ್ದಾರೆ.///////