Belagavi News In Kannada | News Belgaum

ಕಾರ್ಕಳ ಮತ ಕ್ಷೇತ್ರದಿಂದ ಪ್ರಮೋದ್ ಮುತಾಲಿಕ್ ಕಣಕ್ಕೆ

ಉಡುಪಿ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಘೋಷಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 12 ಕ್ಷೇತ್ರಗಳಲ್ಲಿ ಪ್ರವಾಸ ನಡೆಸಿ ಕಾರ್ಯಕರ್ತರು ಸಲ್ಲಿಸಿದ ವರದಿ ಬಳಿಕ ಅಂತಿಮವಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
ಕ್ಷೇತ್ರಕ್ಕೆ 7-8 ಬಾರಿ ಭೇಟಿ ನೀಡಿದ್ದೇನೆ. ಜನರು ಬೆಂಬಲ ನೀಡಿದ್ದಾರೆ. ಹೀಗಾಗಿ ನಾನು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು.
ನಾನು  ಬಿಜೆಪಿ ಸಿದ್ಧಾಂತ ವಿರೋಧಿ ಅಲ್ಲ. ಬಿಜೆಪಿಯ ಕೆಲ ವ್ಯಕ್ತಿಗಳು, ಅವರ ತತ್ವ, ಸಿದ್ಧಾಂತದ ವಿರುದ್ಧ ಹೋರಾಟ. ಹಿಂದುತ್ವದ ಪ್ರಮಾಣಿಕತೆ ಇದ್ದರೆ ಬಿಜೆಪಿಯಿಂದ ನನಗೆ ಬೆಂಬಲಿಸಲಿ ಎಂದು ಹೇಳಿದ್ದಾರೆ.//////