Belagavi News In Kannada | News Belgaum

ಸಂವಿಧಾನ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆ ಸಮಾನತೆ: ಉಸ್ತುವಾರಿ ಸಚಿವ ಗೋವಿಂದ ಕಾರಜೋಳ

ಜಿಲ್ಲೆಯಲ್ಲಿ 74ನೇ ಗಣರಾಜ್ಯೋತ್ಸವದ ಸಂಭ್ರಮ

ಬೆಳಗಾವಿ, ಜ.26. : “ಗಣತಂತ್ರ ಭಾರತವು ಭಾರತದ ಪ್ರತಿ ಪ್ರಜೆಗೂ ಪರಮಾಧಿಕಾರವನ್ನು ಘೋಷಿಸಿದೆ. ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ನೀಡುವುದರ ಮೂಲಕ ಮೂಲಭೂತ ಹಕ್ಕುಗಳನ್ನು ದಯಪಾಲಿಸಿದೆ. ಸಾಮಾಜಿಕ ನ್ಯಾಯ, ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರಂತ್ರ್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ” ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದರು.
74ನೇ ಗಣರಾಜ್ಯೋತ್ಸವ ಅಂಗವಾಗಿ ಗುರುವಾರ (ಜ.26) ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಚಿಂತನೆಯ ಫಲವಾಗಿ ನಾವಿಂದು ಜಗತ್ತಿಗೆ ಮಾದರಿಯಾದ ಸಂವಿಧಾನದ ವಾರಸುದಾರರಾಗಿದ್ದೇವೆ. ಪರಕೀಯರ ಆಡಳಿತದಲ್ಲಿದ್ದ ಭಾರತವು ಕೇವಲ 75 ವರ್ಷಗಳಲ್ಲಿ ಅತ್ಯಂತ ಬಲಿಷ್ಠ ಪ್ರಜಾತಂತ್ರ ರಾಷ್ಟವಾಗಿ ಹೊರಹೊಮ್ಮಲು ಈ ಸಂವಿಧಾನವೇ ಮಾರ್ಗದರ್ಶಿಯಾಗಿದೆ.
ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಜತೆ ಗಡಿ ಹಂಚಿಕೊಂಡಿರುವ ನಮ್ಮ ಬೆಳಗಾವಿ ಜಿಲ್ಲೆ ಕರ್ನಾಟಕದ ಜಿಲ್ಲೆಗಳಲ್ಲಿ ಹಿರಿದಾದ ಸ್ಥಾನಪಡೆದಿದೆ. ಇಲ್ಲಿನ ಜನರು ಧರ್ಮ ಸಹಿಷ್ಣುಗಳು. ಭಾಷಾ ವೈವಿಧ್ಯತೆಯ ನಡುವೆಯೂ ಏಕತೆಯನ್ನು ಮೆರೆದವರು ಅದಕ್ಕಾಗಿ ಅವರನ್ನು ಅಭಿನಂದಿಸುತ್ತಿದ್ದೇನೆ ಎಂದು ಸಚಿವ ಗೋವಿಂದ ಕಾರಜೋಳ ಅವರು ಹೇಳಿದರು.
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಬೆನಕೆ, ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ, ಉತ್ತರ ವಲಯ ಐಜಿಪಿ ಎನ್.ಸತೀಶ್ ಕುಮಾರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ದರ್ಶನ್. ಹೆಚ್.ವಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿವಿಧ ಶಾಲಾ-ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರ ಗಣರಾಜ್ಯೋತ್ಸವ ಸಂದೇಶ:

ಆದರಣ ೀಯರೇ, ಬೆಳಗಾವಿ ಜಿಲ್ಲೆಯ ಸಮಸ್ತ ನಾಗರೀಕರೇ,
ಭಾರತ ರಾಷ್ಟ್ರವು ಗಣರಾಜ್ಯವೆಂದು 1950ರ ಜನವರಿ 26ರಂದು ಘೋಷಿಸಿಕೊಂಡಿತು. ಸ್ವಾತಂತ್ರ್ಯದ ಅಮೃತ ಘಳಿಗೆಯಲ್ಲಿ ಇಂದು ಆಚರಿಸಲಾಗುತ್ತಿರುವ 74ನೇ ಗಣರಾಜೋತ್ಸವದ ಶುಭಾಶಯಗಳನ್ನು ತಿಳಿಸಲು ನನಗೆ ಅತ್ಯಂತ ಸಂತೋಷವೆನಿಸುತ್ತದೆ.
ಇಂದಿನ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಭಾಗಿಯಾಗಿರುವ ನಾಡಿನ ಎಲ್ಲ ಹಿರಿಯರಿಗೆ, ಕವಿ-ಸಾಹಿತಿಗಳಿಗೆ, ಚಿಂತಕರು, ಜಿಲ್ಲೆಯ ಶಾಸಕ ಮಿತ್ರರು, ಸಂಸದರು, ಹಾಗೂ ಎಲ್ಲ ಜನಪ್ರತಿನಿಧಿಗಳು, ನಾಗರಿಕ ಬಂಧುಗಳು, ಸಹೋದರ-ಸಹೋದರಿಯರು ಮತ್ತು ಮಾಧ್ಯಮ ಸ್ನೇಹಿತರಿಗೆ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಬೆಳಗಾವಿ ಜಿಲ್ಲೆ ವಿಸ್ತಾರದಲ್ಲೂ ವಿನ್ಯಾಸದಲ್ಲೂ ಚಾರಿತ್ರಿಕವಾಗಿ ತನ್ನದೇ ಆದ ಮಹತ್ವವನ್ನು ದಾಖಲಿಸಿದೆ. ರಾಷ್ಟ್ರ ಭಕ್ತಿಯು ಜಿಲ್ಲೆಯ ಜನತೆಯ ರಕ್ತ ಹಾಗೂ ನರನಾಡಿಗಳಲ್ಲಿ ಹರಿದಾಡುತ್ತಿದೆ. ಸ್ವಾತಂತ್ರ್ಯದ ಪೂರ್ವದಲ್ಲಿಯೇ ನಮ್ಮ ಜಿಲ್ಲೆಯ ಹೋರಾಟಗಾರರ ಕೊಡುಗೆ ಅನುಪಮವಾದುದು. ರಾಣ ಚನ್ನಮ್ಮ, ಸಂಗೊಳ್ಳಿ ರಾಯಣ್ಣರಿಂದ ಹಿಡಿದು ಗಂಗಾಧರರಾವ್ ದೇಶಪಾಂಡೆಯವರವರೆಗೆ ಸಾವಿರಾರು ದೇಶಭಕ್ತರು ಸ್ವಾತಂತ್ರ್ಯಕ್ಕಾಗಿ ಈ ನೆಲದಲ್ಲಿ ತ್ಯಾಗ ಬಲಿದಾನಗಳಿಗೆ ತಮ್ಮನ್ನು ಸಮರ್ಪಿಸಿಕೊಂಡರು.
ಈ ನೆಲವು ಗಾಂಧೀಜಿ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾತ್ಮರು ನಡೆದಾಡಿದ ನೆಲವಾಗಿದೆ. ಚನ್ನಮ್ಮ, ರಾಯಣ್ಣರು ಸ್ವಾಭಿಮಾನಕ್ಕಾಗಿ ಆತ್ಮ ಸಮರ್ಪಣೆ ಮಾಡಿಕೊಂಡ ನೆಲ. ಮಧ್ಯಯುಗೀನ ಚರಿತ್ರೆಯಲ್ಲಿ ಶರಣರು ನಡೆದಾಡಿದ ವೀರ ತಪೆÇೀಭೂಮಿಯಿದು.
ಭಾರತ ರಾಷ್ಟವು ಗಣರಾಜ್ಯವೆಂದು 1950ರ ಜನವರಿ 26ರಂದು ಘೋಷಿಸಿಕೊಂಡಿತು. ನನ್ನ ಅರ್ಥದಲ್ಲಿ ಈ ಗಣರಾಜ್ಯ ದಿನವು ದೇಶದ ನಾಗರಿಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದೆ. ನಮ್ಮ ಸಂವಿಧಾನವನ್ನು ಒಪ್ಪಿಕೊಂಡ ದಿನವಿದು. ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ದಿನವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರಂಥಹ ಮಹಾನ್ ಮಾನವತಾವಾದಿಗಳು ರಾಷ್ಟ್ರದ ಅಭಿವೃದ್ಧಿಯ ಬಗೆಗೆ ಹಗಲಿರುಳೆನ್ನದೆ ಚಿಂತಿಸಿ ರಚಿಸಿದ ಭವ್ಯಭಾರತದ ಸತ್ಸಂಕಲ್ಪ ಇದು.
ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಚಿಂತನೆಯ ಫಲವಾಗಿ ನಾವಿಂದು ಜಗತ್ತಿಗೆ ಮಾದರಿಯಾದ ಸಂವಿಧಾನದ ವಾರಸುದಾರರಾಗಿದ್ದೇವೆ. ಪರಕೀಯರ ಆಡಳಿತದಲ್ಲಿದ್ದ ಭಾರತವು ಕೇವಲ 75 ವರ್ಷಗಳಲ್ಲಿ ಅತ್ಯಂತ ಬಲಿಷ್ಠ ಪ್ರಜಾತಂತ್ರ ರಾಷ್ಟವಾಗಿ ಹೊರಹೊಮ್ಮಲು ಈ ಸಂವಿಧಾನವೇ ಮಾರ್ಗದರ್ಶಿಯಾಗಿದೆ.
ಗಣತಂತ್ರ ಭಾರತವು ಭಾರತದ ಪ್ರತಿ ಪ್ರಜೆಗೂ ಪರಮಾಧಿಕಾರವನ್ನು ಘೋಷಿಸಿದೆ. ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ನೀಡುವುದರ ಮೂಲಕ ಮೂಲಭೂತ ಹಕ್ಕುಗಳನ್ನು ದಯಪಾಲಿಸಿದೆ. ಸಾಮಾಜಿಕ ನ್ಯಾಯ, ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರಂತ್ರ್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ.
ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಜತೆ ಗಡಿ ಹಂಚಿಕೊಂಡಿರುವ ನಮ್ಮ ಬೆಳಗಾವಿ ಜಿಲ್ಲೆ ಕರ್ನಾಟಕದ ಜಿಲ್ಲೆಗಳಲ್ಲಿ ಹಿರಿದಾದ ಸ್ಥಾನಪಡೆದಿದೆ. ಇಲ್ಲಿನ ಜನರು ಧರ್ಮ ಸಹಿಷ್ಣುಗಳು. ಭಾಷಾ ವೈವಿಧ್ಯತೆಯ ನಡುವೆಯೂ ಏಕತೆಯನ್ನು ಮೆರೆದವರು; ಅದಕ್ಕಾಗಿ ಅವರನ್ನು ಅಭಿನಂದಿಸುತ್ತಿದ್ದೇನೆ.
ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರ ಮಾರ್ಗದರ್ಶನ ಮತ್ತು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರವು ಕೋವಿಡ್, ಪ್ರವಾಹ, ಆರ್ಥಿಕ ಹಿಂಜರಿತ ಸೇರಿದಂತೆ ಹತ್ತಾರು ಸವಾಲುಗಳ ನಡುವೆಯೂ ನೀರಾವರಿ ಸೌಲಭ್ಯ ವಿಸ್ತರಣೆ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ.
ನಮ್ಮ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪರಿಹಾರೋಪಾಯ ಕಾರ್ಯಗಳನ್ನು ಕೈಗೊಂಡು ಇಡೀ ದೇಶಕ್ಕೆ ಮಾದರಿಯಾಗಿದೆ. ಇದಲ್ಲದೇ ನವೋದ್ಯಮಗಳ ಸ್ಥಾಪನೆ, ಕೈಗಾರಿಕಾ ಸೌಲಭ್ಯಗಳ ವಿಸ್ತರಣೆ, ಬಂಡವಾಳ ಹೂಡಿಕೆಗೆ ಅನುಕೂಲಕರ ವಾತಾವರಣ ನಿರ್ಮಾಣ ಹಾಗೂ ಜಿ.ಎಸ್.ಟಿ. ಸಂಗ್ರಹದಲ್ಲೂ ಕರ್ನಾಟಕ ರಾಜ್ಯ ಮುಂಚೂಣ ಯಲ್ಲಿದೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇತ್ತೀಚೆಗೆ ವಿಧಾನಮಂಡಲ ಚಳಿಗಾಲ ಅಧಿವೇಶನವನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಸಿದ ಕರ್ನಾಟಕ ಸರ್ಕಾರವು ಈ ಅಧಿವೇಶನ ಸಂದರ್ಭದಲ್ಲಿ ಉತ್ತರ ಕರ್ನಾಟಕದ 13 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಿದೆ.
ಈ ಭಾಗದ ಜನರ ಬಹುದಿನಗಳ ಕನಸಾಗಿರುವ ಕಳಸಾ-ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಆದಷ್ಟು ಶೀಘ್ರದಲ್ಲೇ ಕಾಮಗಾರಿ ಅನುಷ್ಠಾನಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿದೆ.
ಗಡಿ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿರುತ್ತದೆ. ಮಾನ್ಯ ಮುಖ್ಯಮಂತ್ರಿಗಳು ಈ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಮುಂಬೈ-ಕರ್ನಾಟಕ ಭಾಗವನನ್ನು “ಕಿತ್ತೂರು-ಕರ್ನಾಟಕ” ಎಂದು ನಾಮಕರಣ ಮಾಡುವುದಾಗಿ ನೀಡಿದ್ದ ಭರವಸೆಯನ್ನು ಈಗಾಗಲೇ ಈಡೇರಿಸಿದ್ದಾರೆ.
ಅದೇ ರೀತಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಘೋಷಣೆ ಮಾಡಿದ್ದಲ್ಲದೇ ಈ ಬಾರಿ ಅಕ್ಷರಶಃ ಪಾಲಿಸಿದ್ದಲ್ಲದೇ ಸ್ವತಃ ಜ್ಯೋತಿಯಾತ್ರೆಗೆ ಚಾಲನೆ ನೀಡಿರುತ್ತಾರೆ. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ವಿಷಯ ಜಿಲ್ಲೆಯ ಜನರಲ್ಲಿ ಸಂತಸ ಮೂಡಿಸಿದೆ.
ಇದಲ್ಲದೇ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೂ ಸರಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ.
2022ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಉಂಟಾದ ಅತಿವೃಷ್ಟಿ/ ಪ್ರವಾಹದಿಂದಾಗಿ ಜಿಲ್ಲೆಯಲ್ಲಿ ಹಾನಿಯಾದ ಬೆಳೆಗಳಿಗೆ ಸಂಭಂದಿಸಿದಂತೆ 71,896 ರೈತರಿಗೆ ರೂ.81.96 ಕೋಟಿಗಳ ಪರಿಹಾರವನ್ನು ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಸಂದಾಯವಾಗಿರುತ್ತದೆ.
ಜಿಲ್ಲೆಯಲ್ಲಿ 4177 ಮನೆಗಳಿಗೆ ರೂ 30.62 ಕೋಟಿಗಳನ್ನು ಫಲಾನುಭವಿಗಳ ಖಾತೆಗೆ ಆರ್ಟಿ.ಜಿ.ಎಸ್ ಮೂಲಕ ಬಿಡುಗಡೆ ಮಾಡಲಾಗಿದೆ.
ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಪ್ರೌಢ ಶಿಕ್ಷಣದ ಹೆಣ್ಣು ಮಕ್ಕಳಿಗೆ ಹಾಗೂ ಎಸ್.ಎಸ್.ಎಲ್.ಸಿ ನಂತರ ಉನ್ನತ ಶಿಕ್ಷಣಕ್ಕೆ ಪೆÇ್ರೀತ್ಸಾಹ ನೀಡಲು ರೈತರ ಮಕ್ಕಳಿಗೆ ವಿಶೇಷ ಶಿಷ್ಯವೇತನ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದೆ.
ಈ ಯೋಜನೆಯಡಿ ಜಿಲ್ಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ 99952 ರೈತ ಮಕ್ಕಳಿಗೆ ಒಟ್ಟು ರೂ. 38.46 ಕೋಟಿ ಶಿಷ್ಯವೇತನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ಹಣ ವರ್ಗಾಗಣೆ ಮಾಡಲಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುವ ಮೂಲಕ ಯೋಜನೆ ಅನುಷ್ಠಾನದಲ್ಲಿ ಬೆಳಗಾವಿ ಪ್ರಥಮ ಸ್ಥಾನದಲ್ಲಿದೆ.
ರೈತರ ಆದಾಯವನ್ನು ಹೆಚ್ಚಿಸಲು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ, 11ನೇ ಕಂತಿನಲ್ಲಿ ಜಿಲ್ಲೆಯ ಒಟ್ಟು 5.59 ಲಕ್ಷ ರೈತ ಕುಟುಂಬಗಳಿಗೆ ರೂ. 111.78 ಕೋಟಿ ರೂಪಾಯಿ ನೇರವಾಗಿ ರೈತರ ಖಾತೆಗಳಿಗೆ ಜಮೆ ಮಾಡಲಾಗಿದೆ.
ಯೋಜನೆ ಪ್ರಾರಂಭದಿಂದ ಇಲ್ಲಿಯವರೆಗೆ ಜಿಲ್ಲೆಯ 5.66 ಲಕ್ಷ ರೈತರ ಖಾತೆಗಳಿಗೆ ಇಲ್ಲಿಯವರೆಗೆ ರೂ. 1675.02 ಕೋಟಿಗಳನ್ನು ನೇರವಾಗಿ ರೈತರ ಖಾತೆಗಳಿಗೆ ಜಮೆ ಮಾಡಲಾಗಿದೆ.
ಪ್ರಧಾನ ಮಂತ್ರಿ ಆತ್ಮನಿರ್ಭರ ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಉತ್ತೇಜನಗೊಳಿಸುವುದಕ್ಕೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ 236 ಘಟಕಗಳಿಗೆ ಬ್ಯಾಂಕ್ ನಿಂದ ಸಾಲ ಸೌಲಭ್ಯ ಒದಗಿಸಿ ರಾಜ್ಯದಲ್ಲಿ ಅತಿ ಹೆಚ್ಚು ಘಟಕಗಳಿಗೆ ಸಹಾಯಧನ ಕೊಡಿಸಲು ಕ್ರಮವಹಿಸಲಾಗಿದೆ.

2022-23ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಜಿಲ್ಲೆಗೆ ರೂ 11.84 ಕೋಟಿ ಅನುದಾನ ನಿಗದಿಯಾಗಿರುತ್ತದೆ.
ಅನ್ನಭಾಗ್ಯ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯಡಿ ಒಟ್ಟು 1824 ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದು, ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಹೀಗೆ ಒಟ್ಟು 14,69,294 ಪಡಿತರ ಚೀಟಿಗಳ 48,52,182 ಫಲಾನುಭವಿಗಳು ಈ ಯೋಜನೆಯ ಸದುಪಯೊಗ ಪಡೆದುಕೊಳ್ಳುತ್ತಿದ್ದಾರೆ.
ಜಿಲ್ಲೆಯಲ್ಲಿ 36,44,572 ಜನರಿಗೆ ಮೊದಲನೇ ಡೋಸ್ ಲಸಿಕೆ ನೀಡಲಾಗಿದೆ. ಶೇಕಡಾ 102.20% ರಷ್ಟು ಪ್ರಗತಿ ಸಾಧಿಸಲಾಗಿದೆ. 2ನೇ ಡೋಸ್ 37,28,056 ಜನರಿಗೆ ಲಸಿಕೆ ನೀಡಲಾಗಿದೆ. ಶೇಕಡಾ 104.54% ರಷ್ಟು ಪ್ರಗತಿ ಸಾಧಿಸಲಾಗಿದೆ.
ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ 30 ಅಕ್ಟೋಬರ್ 2018 ರಿಂದ ಜನೇವರಿ 2023ವರೆಗೆ ಒಟ್ಟು 2 ಲಕ್ಷ ಫಲಾನುಭವಿಗಳಿಗೆ 190 ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ.
“ನಮ್ಮ ಕ್ಲಿನಿಕ್” ಯೋಜನೆಯಡಿ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ 21 ಕ್ಲಿನಿಕ್ ಗಳು ಮಂಜೂರಾಗಿದ್ದು, ಅವುಗಳಲ್ಲಿ 6 ಕ್ಲಿನಿಕ್‍ಗಳನ್ನು ಆರಂಭಿಸಲಾಗಿದೆ. ಕಿದ್ವಾಯಿ ಸ್ಮಾರಕ ಗ್ರಂಥಿಗಳ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯನ್ನು ಬೆಳಗಾವಿ ನಗರದಲ್ಲಿ ಪ್ರಾರಂಭಿಸಲು ಮಂಜೂರಾತಿ ದೊರೆತಿದೆ.
“ನೇಕಾರರ ಸಮ್ಮಾನ” ಯೋಜನೆಯಡಿ ಕೈಮಗ್ಗ ನೇಕಾರರಿಗೆ ಪ್ರತಿ ವರ್ಷ ನೀಡಲಾಗುವ ರೂ.2000 ಗಳನ್ನು ಪ್ರಸಕ್ತ ಸಾಲಿನಿಂದ (2022-23) ತಲಾ ರೂ.5,000 ಗಳಿಗೆ ಹೆಚ್ಚಿಸಲಾಗಿದ್ದು, ಪ್ರಯುಕ್ತ ಜಿಲ್ಲೆಯಲ್ಲಿ ಒಟ್ಟು 5125 ಕೈಮಗ್ಗ ನೇಕಾರರರಿಗೆ ತಲಾ ರೂ.5,000 ಡಿ.ಬಿ.ಟಿ ಮೂಲಕ ಜಮಾ ಮಾಡಲಾಗಿರುತ್ತದೆ.
ಶೇ.1 ಮತ್ತು 3 ರ ಬಡ್ಡಿ ದರದಲ್ಲಿ ಸಾಲ ಯೋಜನೆಯಡಿ ಜಿಲ್ಲೆಯ 1226 ನೇಕಾರರಿಗೆ ರೂ.32.57 ಲಕ್ಷ ಬಡ್ಡಿ ಸಹಾಯಧನ ಬಿಡುಗಡೆ ಮಾಡಲಾಗಿದೆ.
ವಿದ್ಯುತ್ ಮಗ್ಗ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ನೇಕಾರರಿಗೂ “ನೇಕಾರರ ಸಮ್ಮಾನ” ಯೋಜನೆಯನ್ನು ಪ್ರಸಕ್ತ ಸಾಲಿನಿಂದ ವಿಸ್ತರಿಸಿ ಜಾರಿಗೊಳಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 21,720 ಫಲಾನುಭವಿಗಳಿಗೆ ಇದರ ಪ್ರಯೋಜನ ದೊರೆಯಲಿದೆ.
ಮಾತೃವಂದನಾ ಯೋಜನೆಯು ಮೊದಲ ಗರ್ಭಿಣ ಯರಿಗೆ ಮಾತ್ರ ಅನ್ವಯಿಸುತ್ತದೆ. ಈ ಯೋಜನೆಯಲ್ಲಿ ಗರ್ಭಿಣ ಹಾಗೂ ಬಾಣಂತಿಯರಿಗೆ ರೂ. 5,000 ಗಳನ್ನು ಒಟ್ಟು 3 ಕಂತುಗಳಲ್ಲಿ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ಒಟ್ಟು 1.72 ಲಕ್ಷ ಫಲಾನುಭವಿಗಳಿಗೆ 75 ಕೋಟಿ ರೂ. ಮೊತ್ತವನ್ನು ಸಂದಾಯ ಮಾಡಲಾಗಿದೆ.
ಭಾಗ್ಯಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳಿಗೆ 1 ಲಕ್ಷ ರೂಪಾಯಿಗಳ ಪರಿಪಕ್ವ ಮೊತ್ತ ದೊರೆಯುವಂತೆ ಬೆಳಗಾವಿ ಜಿಲ್ಲೆಗೆ ಇಲ್ಲಿಯವರೆಗೆ 2.80 ಲಕ್ಷ ಫಲಾನುಭವಿಗಳಿಗೆ ಮಂಜೂರಿ ನೀಡಿದ್ದು, ಇಲ್ಲಿಯವರೆಗೆ 2,42,747 ಬಾಂಡ್‍ಗಳನ್ನು ಹಾಗೂ ಸುಕನ್ಯ ಸಮೃದ್ಧಿ ಯೋಜನಾ ಖಾತೆಯ 23,639 ಪಾಸ್‍ಪುಸ್ತಕಗಳನ್ನು ವಿತರಣೆ ಮಾಡಲಾಗಿದೆ.
ಪ್ರಧಾನ ಮಂತ್ರಿ ಖನಿಜ ಕ್ಷೇತ್ರ ಕಲ್ಯಾಣ ಯೋಜನೆಗಳ ಮಾರ್ಗಸೂಚಿಯಂತೆ, ಜಿಲ್ಲೆಯಲ್ಲಿನ ಗಣ ಬಾಧಿತ ಪ್ರದೇಶಗಳಿಗೆ, ಮೂಲಸೌಕರ್ಯ ಮತ್ತು ಅಭಿವೃದ್ಧಿ ಕಾರ್ಯಗಳಿಗೆ, ಡಿ.ಎಂ.ಎಫ್. ಅನುದಾನದಿಂದ ಇದುವರೆಗೆ 24.95 ಕೋಟಿ ಅನುದಾನ ಬಿಡುಗಡೆಗೊಳಿಸಿ ವೆಚ್ಚ ಮಾಡಲಾಗಿದೆ.
ಕೆಐಎಡಿಬಿ ವತಿಯಿಂದ ಇಲ್ಲಿಯವರೆಗೆ ಕಿತ್ತೂರು ಕೈಗಾರಿಕಾ ಪ್ರದೇಶದಲ್ಲಿ 275.12 ಎಕರೆ ಜಮೀನು ಅಭಿವೃದ್ಧಿ ಪಡಿಸಲಾಗಿದ್ದು, 135 ಉದ್ಯಮಿಗಳಿಗೆ 83.18 ಎಕರೆ ಹಂಚಿಕೆ ಮಾಡಲಾಗಿದೆ. ಕಣಗಲಾ ಕೈಗಾರಿಕಾ ಪ್ರದೇಶದಲ್ಲಿ 818 ಎಕರೆ ಜಮೀನು ಅಭಿವೃದ್ಧಿಪಡಿಸಲಾಗಿದ್ದು, ಇಲ್ಲಿ ಒಟ್ಟಾರೆ 104 ಉದ್ಯಮಿಗಳಿಗೆ 279.95 ಎಕರೆ ಹಂಚಿಕೆ ಮಾಡಲಾಗಿದೆ.

ಮಾನ್ಯ ಪ್ರಧಾನಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಜಲಜೀವನಜೀವನ್ ಮಿಷನ್ ಅಡಿಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗಗಳ ವ್ಯಾಪ್ತಿಯ 2657 ಜನವಸತಿ ಪ್ರದೇಶಗಳಲ್ಲಿ ಮೂರು ಹಂತಗಳಲ್ಲಿ ಒಟ್ಟಾರೆ 5.95 ಲಕ್ಷ ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕವನ್ನು ಒದಗಿಸಲಾಗುತ್ತಿದೆ.
ಬೆಳಗಾವಿ ಜಿಲ್ಲೆಯ ಬೆಳಗಾವಿ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 26 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿದ್ದು, ಒಟ್ಟು 262 ಜನವಸತಿಗಳಿಗೆ ನದಿ ಜಲ-ಮೂಲದಿಂದ ಕುಡಿಯುವ ನೀರು ಒದಗಿಸಲಾಗುತ್ತಿದೆ.
ಬೆಳಗಾವಿ ವಿಭಾಗ ವ್ಯಾಪ್ತಿಯಲ್ಲಿ ಹೊಸದಾಗಿ 4 ಬಹುಗ್ರಾಮ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು. ನಾಲ್ಕು ಬಹುಗ್ರಾಮಗಳ ಅನುಷ್ಠಾನಕ್ಕೆ ರೂ. 1,444 ಕೋಟಿಗಳಿಗೆ ಅನುಮೋದನೆ ನೀಡಲಾಗಿದೆ.
ಚಿಕ್ಕೋಡಿ ವಿಭಾಗಕ್ಕೆ ಸಂಬಂಧಿಸಿದಂತೆ ಒಟ್ಟು 9 ಹೊಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಪ್ರಸ್ತಾಪಿಸಿ, ಅದರಲ್ಲಿ ಅಥಣ ತಾಲೂಕಿಗೆ 2, ಚಿಕ್ಕೋಡಿ ತಾಲೂಕಿಗೆ 2, ಗೋಕಾಕ ತಾಲೂಕಿಗೆ 1 ಹಾಗೂ ರಾಯಬಾಗ ತಾಲೂಕಿಗೆ 2 ಹೀಗೆ ಒಟ್ಟು 7 ಯೋಜನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ದೊರೆತಿರುತ್ತದೆ.
2022-23 ನೇ ಸಾಲಿನಲ್ಲಿ ಮಹಾತ್ಮಾ ಗಾಂಧೀ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಇಲ್ಲಿಯವರೆಗೆ 7.86 ಲಕ್ಷ ಕುಟುಂಬಗಳು ನೋಂದಣ ಯಾಗಿದ್ದು, 7.86 ಲಕ್ಷ ಉದ್ಯೋಗ ಚೀಟಿಗಳನ್ನು ವಿತರಿಸಲಾಗಿರುತ್ತದೆ. ಭೌತಿಕ ಗುರಿ 125.00 ಲಕ್ಷಗಳ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿತ್ತು. ಅದರ ಪೈಕಿ 103.28 ಲಕ್ಷಗಳಷ್ಟು ಮಾನವ ದಿನಗಳನ್ನು ಸೃಜಿಸಿ ಶೇ 82.63% ರಷ್ಟು ಪ್ರಗತಿ ಸಾಧಿಸಲಾಗಿದೆ. ಅದರಂತೆ 2.48 ಲಕ್ಷ ಕುಟುಂಬಗಳಿಗೆ ಹಾಗೂ 3.79 ಲಕ್ಷ ಕೂಲಿ ಕಾರ್ಮಿಕರಿಗೆ ಉದ್ಯೋಗ ಒದಗಿಸಲಾಗಿರುತ್ತದೆ.
ಸ್ವತಂತ್ರ ಭಾರತದ 75ನೇ ಮಹೋತ್ಸವದ ಪ್ರಯುಕ್ತ ಸರ್ವರಿಗೂ ವಸತಿ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲೆಯಲ್ಲಿ 499 ಗ್ರಾಮ ಪಂಚಾಯತಿಗಳ ಪೈಕಿ ಒಟ್ಟು 66 ಗ್ರಾಮ ಪಂಚಾಯತಿಗಳನ್ನು ಅಮೃತ ಗ್ರಾಮೀಣ ವಸತಿ ಯೋಜನೆಯಡಿ ಆಯ್ಕೆ ಮಾಡಲಾಗಿದ್ದು, ಈಗಾಗಲೇ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗಿರುತ್ತದೆ.
2021-22ನೇ ಸಾಲಿಗೆ ಬಸವ ವಸತಿ ಯೋಜನೆಯಡಿ ಒಟ್ಟು 18506 ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಡಿ ಒಟ್ಟು 5914 ಗುರಿಯನ್ನು, ಹೀಗೆ ಬೆಳಗಾವಿ ಜಿಲ್ಲೆಗೆ ಒಟ್ಟು 24420 ಮನೆಗಳ ಗುರಿ ನಿಗದಿಪಡಿಸಿ ಆದೇಶಿಸಿರುತ್ತಾರೆ.
ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 2779 ಮನೆಗಳು ಮಂಜೂರಾಗಿದ್ದು, ಯೋಜನಾ ವೆಚ್ಚ – 150 ಕೋಟಿ ರೂಪಾಯಿ ಆಗಿರುತ್ತದೆ. ಹಾಗೂ ಇದರಲ್ಲಿ ಒಟ್ಟು 2222 ಮನೆಗಳು ಪೂರ್ಣಗೊಂಡಿದ್ದು ಮತ್ತು 557 ಮನೆಗಳ ಕಾಮಗಾರಿ ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ – ಹೆಚ್.ಎಫ್.ಎ. ಮನೆಗಳು ಪ್ರಸ್ತುತ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ 11982 ಮನೆಗಳ ಮಂಜೂರಾಗಿದ್ದು, ಯೋಜನಾ ್ಝ್ಪ¸್ಲ¸–81 ಕೋಟಿ ರೂಪಾಯಿಗಳಾಗಿದೆ. ಕಾಮಗಾರಿ ಪ್ರಾರಂಭವಾಗಿರುತ್ತದೆ.
ನೀರಾವರಿ (ಉತ್ತರ) ವಲಯ ವ್ಯಾಪ್ತಿಯಡಿಯಲ್ಲಿ ಪ್ರಮುಖವಾಗಿ ಘಟಪ್ರಭಾ, ಮಾರ್ಕಂಡೇಯ, ಬಳ್ಳಾರಿ ನಾಲಾ, ಕಿಣ ಯೆ ಯೋಜನೆ, ಧೂದಗಂಗಾ ಹಾಗೂ ಹಿಪ್ಪರಗಿ ಯೋಜನೆಗಳು (ಒಟ್ಟು 6 ಹರಿ ನೀರು ಯೋಜನೆಗಳು) ಪ್ರಮುಖವಾಗಿರುತ್ತವೆ.
ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ ತುಬಚಿ-ಬಬಲೇಶ್ವರ, ಬಸವೇಶ್ವರ (ಕೆಂಪವಾಡ), ವೆಂಕಟೇಶ್ವರ, ಗೊಡಚಿನಮಲ್ಕಿ, ಚಚಡಿ, ಮುರಗೋಡ, ಶ್ರೀ ರಾಮೇಶ್ವರ, ವೀರಭದ್ರೇಶ್ವರ, ಸಾಲಾಪುರ ಹೀಗೆ ಒಟ್ಟು 9 ಏತ ನೀರಾವರಿ ಯೋಜನೆಗಳು ಚಾಲ್ತಿಯಲ್ಲಿರುತ್ತವೆ.
ಈ 9 ನೀರಾವರಿ ಯೋಜನೆಗಳಿಂದ ಬೆಳಗಾವಿ ಜಿಲ್ಲೆಯ 6 ತಾಲೂಕುಗಳ 80,162 ಹೆಕ್ಟೇರ್., ಬಾಗಲಕೋಟೆಯ ಮೂರು ತಾಲೂಕುಗಳ 13,869 ಹೆಕ್ಟೇರ್ ಹಾಗೂ ಬಿಜಾಪೂರ ಜಿಲ್ಲೆಯ 44,375 ಹೆಕ್ಟೇರ್ ಕ್ಷೇತ್ರಕ್ಕೆ ನೀರಾವರಿ ಕಲ್ಪಿಸಬಹುದಾಗಿದೆ.
ಈ ಮೇಲ್ಕಂಡ ಏತ ನೀರಾವರಿ ಯೋಜನೆಗಳಿಗೆ ಈವರೆಗೆ 5380 ಕೋಟಿ ರೂಪಾಯಿ ವೆಚ್ಚವಾಗಿರುತ್ತದೆ.
ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ 5 ಕೆರೆ ತುಂಬುವ ಯೋಜನೆಗಳು ಚಾಲ್ತಿಯಲ್ಲಿವೆ. ಈ ಯೋಜನೆಗಳಿಂದ 125 ಕೆರೆಗಳನ್ನು ಮಳೆಗಾಲದಲ್ಲಿ ತುಂಬಿಸುವ ಗುರಿಯನ್ನು ಹೊಂದಲಾಗಿದ್ದು, ಈವರೆಗೆ ರೂ.273 ಕೋಟಿ ವೆಚ್ಚ ಮಾಡಲಾಗಿರುತ್ತದೆ.
ದಿನಾಂಕ: 22.12.2022 ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಈ ಜಿಲ್ಲೆಯ 4 ಯೋಜನೆಗಳಾದ 1) ಚೆನ್ನವೃಷಭೇಂದ್ರ ಏತ ನೀರಾವರಿ ಯೋಜನೆ 2)ಅರಭಾವಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 20 ಕೆರೆಗಳನ್ನು ಘಟಪ್ರಭಾ ನದಿಯಿಂದ ನೀರು ತುಂಬಿಸುವ ಯೋಜನೆ, 3)ಮಹಾಲಕ್ಷೀ ಏತ ನೀರಾವರಿ ಯೋಜನೆ ಹಾಗೂ 4) ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ- ಈ ಯೋಜನೆಗಳಿಗೆ ಅನುಮೋದನೆಯನ್ನು ನೀಡಲಾಗಿರುತ್ತದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಸ್ಮಾರ್ಟಸಿಟಿಯೋಜನೆ’ ಯಡಿ ಬೆಳಗಾವಿ ಮೊದಲ ಹಂತದಲ್ಲಿ ಆಯ್ಕೆಯಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ 50:50 ಅನುಪಾತದಲ್ಲಿ ಒಟ್ಟು ರೂ.1000 ಕೋಟಿ ಅನುದಾನ ಒದಗಿಸಲಾಗುತ್ತಿದೆ.
ಈ ವರೆಗೆ ರೂ.854 ಕೋಟಿ ಅನುದಾನ ಬಿಡುಗಡೆ ಆಗಿದೆ. ರೂ.804.91 ಕೋಟಿ ಖರ್ಚು ಮಾಡಲಾಗಿದೆ. ಒಟ್ಟು 102 ಕಾಮಗಾರಿಗಳಲ್ಲಿ 78 ಕಾಮಗಾರಿಗಳು ಪೂರ್ಣಗೊಂಡಿದ್ದು, 24 ಕಾಮಗಾರಿಗಳು ಪ್ರಗತಿಯಲ್ಲಿವೆ.
ಬೆಳಗಾವಿ ಸ್ಮಾರ್ಟಸಿಟಿಯು ಪ್ರತಿಷ್ಠಿತ ವಿಶ್ವಸಂಸ್ಥೆ ಏರ್ಪಡಿಸಿದ ‘ಸರ್ವತೋಮುಖ ನಗರ ಸ್ಪರ್ಧೆ’ ಸ್ಮಾರ್ಟ ಸೊಲ್ಯೂಷನ್ಸ್ ಚಾಲೆಂಜ್-2022 ರಲ್ಲಿ ಅಗ್ರ ಸ್ಥಾನಗಳಿಸಿದೆ ಮತ್ತು ‘ಸ್ಮಾರ್ಟ ಅರ್ಬನೇಶನ್-2022’ ರ ಸ್ಪರ್ಧೆಯಲ್ಲಿ 03 ಪ್ರಶಸ್ತಿಗಳನ್ನು ಪಡೆದಿದೆ. ಪ್ರಸ್ತುತ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳನ್ನು ಜೂನ್-2023ರ ಅಂತ್ಯದೊಳಗಾಗಿ ಮುಕ್ತಾಯಗೊಳಿಸಲು ಯೋಜನೆ ಹಮ್ಮಿಕೊಳ್ಳಲಾಗಿದೆ.
***********
‘ಸರ್ವಜನಾಂಗದ ಶಾಂತಿಯ ತೋಟ’ವೆಂದು ರಾಷ್ಟಕವಿ ಕುವೆಂಪು ಅವರು ಕರ್ನಾಟಕವನ್ನು ವ್ಯಾಖ್ಯಾನಿಸಿದ್ದಾರೆ. ಇಂತಹ ತೋಟದಲ್ಲಿ ನಾವೆಲ್ಲಾ ಸಾಮರಸ್ಯದಿಂದ ಬೆಳೆದುನಿಂತ ಫಲಪುಷ್ಪಗಳು. ಈ ನೆಲದ ಮಣ ್ಣನ ಗುಣ, ಗಣತಂತ್ರ ವ್ಯವಸ್ಥೆಯ ಮತ್ತು ಸಂವಿಧಾನದ ಮೂಲ ಆಶಯಗಳನ್ನಿಟ್ಟುಕೊಂಡು ಎಲ್ಲರೂ ಸಹಬಾಳ್ವೆಯಿಂದ ಬದುಕೋಣ. ಇದು ನನ್ನ ಗಣರಾಜ್ಯೋತ್ಸವದ ಸಂದೇಶವಾಗಿದೆ. ಮತ್ತೊಮ್ಮೆ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು. ಎಂದರು