Belagavi News In Kannada | News Belgaum

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಗೆ ಲೋಕಾಯುಕ್ತ ನೋಟಿಸ್ ಜಾರಿ

ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೀಪ್ ಮತ್ತು ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ವಿರುದ್ಧ ಸಾಮಾಜಿ ಕಾರ್ಯಕರ್ತರೊಬ್ಬರು ದಾಖಲಿಸಿರುವ ದೂರಿಗೆ ಸ್ಪಂದಿಸದ ಹಾಗೂ ಮಾಹಿತಿ ಹಕ್ಕಿನಡಿ ಕೇಳಿದ ದಾಖಲೆಗಳನ್ನು ಒದಗಿಸದಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.

ಉಳ್ಳಾಲ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಂಜಾ ಮಾಫಿಯಾ, ಮರಳು, ಹೋಟೆಲ್ ಮಾಲಕರಿಗೆ ಹೀಗೆ ಪ್ರತಿಯೊಂದರಲ್ಲೂ ಹಣದ ಬೇಡಿಕೆ ಇಡುತ್ತಿದ್ದಾರೆ. ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡ ನಂತರ ಕೋಟ್ಯಂತರ ರೂಪಾಯಿ ಸಂಪಾದನೆ ಮಾಡಿದ್ದಾರೆ ಎಂದು ಮೊಹಮ್ಮದ್ ಕಬೀರ್ ಎನ್ನುವವರು ದೂರು ನೀಡಿದ್ದರು. ಈ ದೂರಿಗೆ ಪೊಲೀಸ್ ಆಯಕ್ತರು ಸ್ಪಂದಿಸದ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಇದೀಗ ಲೋಕಾಯುಕ್ತ, ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದು, ದೂರುದಾರು ಮಾಡಿರುವ ಆರೋಪಗಳಿಗೆ ಫೆ.14ರೊಳಗೆ ಸೂಕ್ತ ದಾಖಲೆಗಳೊಂದಿಗೆ ಲೋಕಾಯುಕ್ತಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ನಗರ ದಕ್ಷಿಣ ಎಸಿಪಿಯವರಿಗೆ ಈ ಕುರಿತಂತೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.//////