ಗ್ಯಾಸ್ ಗೀಸರ್ ಸೋರಿಕೆ: ಉಸಿರುಗಟ್ಟಿ ನವವಿವಾಹಿತೆ ಸಾವು

ನವದೆಹಲಿ: ಉತ್ತರ ಪ್ರದೇಶದ ಮೀರತ್ ನಗರದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ನವ ವಧು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಮದುವೆಯಾದ ಮರುದಿನವೇ ಈ ಘಟನೆ ನಡೆದಿದೆ.
ಮಹಿಳೆ ಸ್ನಾನ ಮಾಡಲು ತನ್ನ ಅತ್ತೆಯ ಮನೆಯಲ್ಲಿ ಸ್ನಾನಗೃಹಕ್ಕೆ ಹೋಗಿದ್ದಳು ಮತ್ತು ಸ್ವಲ್ಪ ಸಮಯದವರೆಗೆ ಅಲ್ಲಿಯೇ ಇದ್ದಳು.
ಎಷ್ಟೊತ್ತಾದರೂ ಆಕೆ ಹೊರ ಬಾರದ ಕಾರಣ ಅನುಮಾನಗೊಂಡ ಕುಟುಂಬಸ್ಥರು ಬಾಗಿಲು ತಟ್ಟಿದ್ದಾರೆ. ಆದ್ರೆ, ಆಕೆ ಯಾವುದೇ ಪ್ರತಿಕ್ರಿಯೆ ನೀಡದಿದ್ದಾಗ ಕುಟುಂಬಸ್ಥರು ಬಾಗಿಲು ತೆರೆದು ನೋಡಿದಾಗ ಮಹಿಳೆ ಮೂಲೆಯಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿರುವುದನ್ನು ನೋಡಿದ್ದಾರೆ.
ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಕೆ ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.//////