Belagavi News In Kannada | News Belgaum

ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗ ದೂರು

ಬೆಂಗಳೂರು: ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ಇತರ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರ ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ನಿಯೋಗದಿಂದ ಬೆಂಗಳೂರಿನಲ್ಲಿ ದೂರು ಸಲ್ಲಿಸಿದೆ. ಬಿಜೆಪಿಯ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಿದ ‘ಕೈ’ ಪಡೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಯನ್ನ ಅಸ್ತ್ರ ಮಾಡಿಕೊಂಡಿದೆ.

`ಪ್ರತಿಯೊಬ್ಬ ಮತದಾರನಿಗೆ 6 ಸಾವಿರ ನೀಡಿ ಮತ ಕೇಳಲಾಗುವುದು’ ಎಂದಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ. ಇದರೊಂದಿಗೆ ರಾಜ್ಯದ 5 ಕೋಟಿ ಮತದಾರರನ್ನ 30 ಸಾವಿರ ಕೋಟಿಗೆ ಖರೀದಿಸಲು ಬಿಜೆಪಿ ಸಂಚು ರೂಪಿಸಿದೆ. ಈ ಸಂಚಿಗೆ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹ ಪ್ರೇರಣೆ ನೀಡಿದ್ದಾರೆ. ಹಾಗಾಗಿ ಕೂಡಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. ಇದೇ ಸಂದರ್ಭದಲ್ಲಿ ಶಿವಾಜಿನಗರದಲ್ಲಿ 9 ಸಾವಿರ ಮತದಾರರ ಹೆಸರು ಡಿಲಿಟ್ ಆಗಿರುವ ಬಗ್ಗೆ ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ ರಿಂದ ಚುನಾವಣಾ ಆಯೋಗಕ್ಕೆ ಮತ್ತೊಂದು ದೂರು ಸಲ್ಲಿಸಲಾಯಿತು.//////