ಪ್ರಚಾರಕ್ಕಿಂತ ಅಭಿವೃದ್ಧಿಗೆ ನಮ್ಮ ಆದ್ಯತೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಯಮಕನಮರಡಿ: ಮತಕ್ಷೇತ್ರದಲ್ಲಿ ಕಳೆದ 15 ವರ್ಷದ ಅವಧಿಯಲ್ಲಿ ನೂರು ಕೆಲಸಗಳನ್ನು ಮಾಡಿದರೂ ನಾವು ಪ್ರಚಾರ ಪಡೆಯಲಿಲ್ಲ. ಆದರೆ ನಮ್ಮ ವಿರೋಧಿಗಳು ಕೆಲಸ ಆರಂಭಕ್ಕೂ ಮುನ್ನವೇ ನೂರು ಬಾರಿ ಪ್ರಚಾರ ಪಡೆಯುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಯಮಕನಮರಡಿ ಮತಕ್ಷೇತ್ರದ ಮನಗುತ್ತಿ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ
ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಿಸಿದ್ದ ಎರಡು ಅಂಗನವಾಡಿ ಕೇಂದ್ರಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಚಾರಕ್ಕಿಂತ ಅಭಿವೃದ್ಧಿಯೇ ನಮಗೆ ಮುಖ್ಯವೆಂದು ತಿಳಿಸಿದರು.
ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ರೈತರು ಕಬ್ಬು ಬೆಳೆದು ಆರ್ಥಿಕವಾಗಿ ಪ್ರಗತಿ ಕಾಣುತ್ತಿದ್ದಾರೆ. ಇನ್ನು ಅನೇಕ ನೀರಾವರಿ ಯೋಜನೆಗಳನ್ನು ಕಾರ್ಯ ರೂಪಕ್ಕೆ ತರುವ ಉದ್ದೇಶವಿದೆ. ಕಾರಣ ತಾವುಗಳು ಇನ್ನೊಮ್ಮೆ ಅಧಿಕಾರ ನೀಡಬೇಕೆಂದು ತಿಳಿಸಿದರು.
ಬಳಿಕ ಮೋದಗಾ ಗ್ರಾಮದಲ್ಲಿ ಜರುಗಲಿರುವ ಭಾವೇಶ್ವರಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಎಲ್ಲ ರೀತಿಯ ಸಹಾಯ-ಸಹಕಾರ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಕಿರಣ ರಜಪೂತ, ಮನಗುತ್ತಿ ಗ್ರಾಮದ ಗುರು-ಹಿರಿಯರು ಸೇರಿದಂತೆ ಮಹಿಳೆಯರು ಇದ್ದರು./////