ಶಾಸಕ ರಮೇಶ್ ಮಾಡಿರುವ ಆರೋಪಗಳು ವೈಯಕ್ತಿಕವಾಗಿವೆ: ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ: ಶಾಸಕ ರಮೇಶ್ ಮಾಡಿರುವ ಆರೋಪಗಳು ವೈಯಕ್ತಿಕವಾಗಿವೆ, ನಾನು ಪ್ರತಿಕ್ರಿಯಿಸುವುದು ಉತ್ತಮವಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಶಾಸಕ ರಮೇಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಆರೋಪಗಳನ್ನು ಮಾಡಿರುವ ಕುರಿತು ಚಿಕ್ಕೋಡಿಯಲ್ಲಿ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಇದು ವೈಯಕ್ತಿಕ ವಿಷಯವಾಗಿರುವುದರಿಂದ ತಾನೇನೂ ಹೇಳಲಾಗದು, ಅವರ ಆರೋಪಗಳಿಗೆ ಸಂಬಂಧಿಸಿದಂತೆ ಪಕ್ಷದ ಅಧ್ಯಕ್ಷರು ಮತ್ತು ಸಿ ಎಲ್ ಪಿ ನಾಯಕ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು.////